ಯೋಗಿ ಆದಿತ್ಯನಾಥ 
ದೇಶ

ಹೊಸ ದಾಖಲೆ ನಿರ್ಮಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಪರೂಪದ ದಾಖಲೆ  ನಿರ್ಮಿಸಿದ  ಹೆಗ್ಗಳಿಕೆಗೆ  ಭಾನುವಾರ ಪಾತ್ರರಾಗಿದ್ದಾರೆ.

ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಪರೂಪದ ದಾಖಲೆ ನಿರ್ಮಿಸಿದ  ಹೆಗ್ಗಳಿಕೆಗೆ  ಭಾನುವಾರ ಪಾತ್ರರಾಗಿದ್ದಾರೆ.

ಉತ್ತರಪ್ರದೇಶದಲ್ಲಿ ಸತತ ಮೂರು ವರ್ಷಗಳ ಕಾಲ ಅಧಿಕಾರದಲ್ಲಿರುವ ಬಿಜೆಪಿಯ ಏಕೈಕ ಮುಖ್ಯಮಂತ್ರಿ ಎಂಬ ದಾಖಲೆಗೆ ಅವರು ಭಾಜನರಾಗಿದ್ದಾರೆ.  2017ರಲ್ಲಿ ನಡೆದ  ಉತ್ತರ ಪ್ರದೇಶ  ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 312 ಸ್ಥಾನಗಳಲ್ಲಿ ಜಯಗಳಿಸಿತ್ತು.  ಅದೇ ವರ್ಷದ ಮಾರ್ಚ್ 15 ರಂದು ಯೋಗಿ ಅಧಿತ್ಯ ನಾಥ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಅವರು  ಅಧಿಕಾರ ವಹಿಸಿಕೊಂಡು ಇಂದು ಮೂರು ವರ್ಷಗಳನ್ನು ಪೂರೈಸಿದ್ದಾರೆ. ಆದರೆ, ಕಲ್ಯಾಣ್ ಸಿಂಗ್, ರಾಮ್ ಪ್ರಕಾಶ್ ಗುಪ್ತಾ ಹಾಗೂ ರಾಜನಾಥ್ ಸಿಂಗ್ ಅವರು    ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರದ ಮುಖ್ಯಮಂತ್ರಿಗಳಾಗಿ ಅಧಿಕಾರ ನಡೆಸಿದರೂ ಇವರಲ್ಲಿ ಯಾರೊಬ್ಬರೂ ಮೂರು ವರ್ಷ ಅಧಿಕಾರ ಪೂರ್ಣಗೊಳಿಸಲು ಸಾಧ್ಯವಾಗಿರಲಿಲ್ಲ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲುವು ಲಭಿಸಿದ್ದು, ಯೋಗಿ ಅದಿತ್ಯ ನಾಥ್ ಅಧಿಕಾರದ ಗದ್ದುಗೆ ಇನ್ನೂ 2 ವರ್ಷ ಭದ್ರವಾಗಿರಲಿದೆ. ಅವರ ಹುದ್ದೆಗೆ ಯಾವುದೇ ಅಡ್ಡಿಯಿಲ್ಲ. ಯೋಗಿ ಸಿಎಂ ಆಗಿ ಮುಂದುವರಿಯಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್