ದೇಶ

ಕೊರೋನಾ ವೈರಸ್ ಹರಡಲು ಸಂಚು: ಚೀನಾ ಅಧ್ಯಕ್ಷ ಕ್ಸಿರನ್ನೇ ಕೋರ್ಟ್‌ಗೆಳೆದ ಉತ್ತರಪ್ರದೇಶ ವಕೀಲ!

Vishwanath S

ಮುಜಾಫರಪುರ: ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಮತ್ತು ಭಾರತದ ಚೀನಾ ರಾಯಭಾರಿ ಸನ್ ವೀಡಾಂಗ್ ವಿರುದ್ಧ ಮುಜಾಫರ್ಪುರ ನ್ಯಾಯಾಲಯದಲ್ಲಿ "ಕರೋನಾ ವೈರಸ್ ಹರಡುವ ಪಿತೂರಿ ನಡೆಸಲಾಗಿದೆ" ಎಂಬ ಆರೋಪದ ಮೇಲೆ ದೂರು ದಾಖಲಾಗಿದೆ.

ಈ ಪ್ರಕರಣದ ವಿಚಾರಣೆ ಏಪ್ರಿಲ್ 11ರಂದು ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್(ಸಿಜೆಎಂ) ನ್ಯಾಯಾಲಯದ ಮುಂದೆ ನಡೆಯಲಿದೆ.

ವಕೀಲ ಸುಧೀರ್ ಕುಮಾರ್ ಓಜಾ ಅವರು ಸಲ್ಲಿಸಿದ ದೂರಿನಲ್ಲಿ, ಕೊರೋನಾ ವೈರಸ್ ಹರಡಲು ಇವರಿಬ್ಬರು ಸಂಚು ಹೂಡಿದ್ದಾರೆ ಎಂದು ಆರೋಪಿಸಲಾಗಿದೆ.

ಭಾರತದಾದ್ಯಂತ 17 ವಿದೇಶಿ ಪ್ರಜೆಗಳು ಸೇರಿದಂತೆ ಕನಿಷ್ಠ 110 ಕೊರೋನಾ ವೈರಸ್ ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಚೀನಾದ ವುಹಾನ್ ನಗರದಲ್ಲಿ ಹುಟ್ಟಿಕೊಂಡ ಕೊರೋನಾ ವೈರಸ್ ಇದುವರೆಗೆ 120ಕ್ಕೂ ಹೆಚ್ಚು ದೇಶಗಳಿಗೆ ಹರಡಿ 1,30,000 ಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿತು. 6500ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಕೊರೋನಾವೈರಸ್ ಅನ್ನು ಸಾಂಕ್ರಾಮಿಕ ರೋಗವೆಂದು ಘೋಷಿಸಿದೆ.
 

SCROLL FOR NEXT