ದೇಶ

ಕೊರೋನಾ ವೈರಸ್: ಭಾರತದಲ್ಲಿ 110ಕ್ಕೆ ಏರಿದ ಸೋಂಕಿತರ ಸಂಖ್ಯೆ

Srinivasamurthy VN

ನವದೆಹಲಿ: ವಿಶ್ವಾದ್ಯಂತ 6 ಸಾವಿರಕ್ಕೂ ಅಧಿಕ ಮಂದಿಯ ಬಲಿ ಪಡೆದಿರುವ ಮಾರಕ ಕೊರೋನಾ ವೈರಸ್ ಎಫೆಕ್ಟ್ ಭಾರತದಲ್ಲಿಯೂ ಮುಂದುವರೆದಿದ್ದು, ಈ ವರೆಗೂ ಸೋಂಕಿಗೆ ತುತ್ತಾದವರ ಸಂಖ್ಯೆ 110ಕ್ಕೆ ಏರಿಕೆಯಾಗಿದೆ.

ಇಂದು ಹಿಮದ ಕಣಿವೆನಾಡು ಉತ್ತರಾಖಂಡದಲ್ಲಿ ಮೊದಲ ಪ್ರಕರಣ ಬೆಳಕಿಗೆ ಬಂದಿದ್ದು, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದಲ್ಲಿ ತಲಾ ಒಂದು ಹೊಸ ಪ್ರಕರಣಗಳು ವರದಿಯಾಗಿವೆ. ಆ ಮೂಲಕ ದೇಶದಲ್ಲಿ ಕೊರೋನಾ ವೈರಸ್ ಸೋಂಕಿಗೆ ತುತ್ತಾದವರ ಸಂಖ್ಯೆ 110ಕ್ಕೆ ಏರಿಕೆಯಾಗಿದೆ. ಈ ಪ್ರಕರಣಗಳ ಒಟ್ಟು ಸಂಖ್ಯೆಯಲ್ಲಿ ದೆಹಲಿ ಮತ್ತು ಕರ್ನಾಟಕದಲ್ಲಿ ಮೃತಪಟ್ಟ ಇಬ್ಬರು ವ್ಯಕ್ತಿಗಳು ಒಳಗೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಉತ್ತರಾಖಂಡದಲ್ಲಿ ಮೊದಲ ಕೋವಿಡ್‌–19 ಪ್ರಕರಣ ಭಾನುವಾರ ವರದಿಯಾಗಿದ್ದು, ದೆಹಲಿಯಲ್ಲಿ ಇದುವರೆಗೆ ಏಳು ಮತ್ತು ಉತ್ತರ ಪ್ರದೇಶದಲ್ಲಿ 12 ಪ್ರಕರಣಗಳು ಪತ್ತೆಯಾಗಿವೆ. ಅಂತೆಯೇ ಕರ್ನಾಟಕದಲ್ಲಿ 7, ಮಹಾರಾಷ್ಟ್ರ 32, ಲಡಾಖ್‌ನಲ್ಲಿ ಮೂರು ಮತ್ತು ಜಮ್ಮು ಮತ್ತು ಕಾಶ್ಮೀರ ಇಬ್ಬರು ವ್ಯಕ್ತಿಗಳಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇನ್ನು ಕೇರಳದಲ್ಲಿ 22, ತೆಲಂಗಾಣದಲ್ಲಿ 3, ರಾಜಸ್ಥಾನದಲ್ಲಿ ಎರಡು ಪ್ರಕರಣಗಳು ವರದಿಯಾಗಿದ್ದು, ತಮಿಳುನಾಡು, ಆಂಧ್ರಪ್ರದೇಶ ಮತ್ತು ಪಂಜಾಬ್‌ನಲ್ಲಿ ತಲಾ ಒಂದು ಪ್ರಕರಣ ಬೆಳಕಿಗೆ ಬಂದಿವೆ.

SCROLL FOR NEXT