ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕೊರೋನಾಗೆ ಭಾರತದಲ್ಲಿ ಮೂರನೇ ಬಲಿ: ಮಹಾರಾಷ್ಟ್ರದಲ್ಲಿ 64 ವರ್ಷದ ವ್ಯಕ್ತಿ ಸಾವು, 125ಕ್ಕೆ ಏರಿದ ಸೋಂಕಿತರ ಸಂಖ್ಯೆ 

ವಿಶ್ವಾದ್ಯಂತ ವ್ಯಾಪಕವಾಗಿ ಹಬ್ಬಿರುವ ಮಾರಕ ಕೊರೋನಾ ವೈರಸ್ ದಾಳಿಗೆ ಭಾರತದಲ್ಲಿ ಇದೀಗ ಮೂರನೇ ವ್ಯಕ್ತಿ ಬಲಿಯಾಗಿದ್ದು, ಮಹಾರಾಷ್ಟ್ರದಲ್ಲಿ 64 ವರ್ಷದ ಸೋಂಕು ಪೀಡಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಕೊರೋನಾಗೆ ಮೂರನೇ ಬಲಿ
Srinivasa Murthy VN
Updated On : 17 Mar 2020, 11:14 am

ನವದೆಹಲಿ: ವಿಶ್ವಾದ್ಯಂತ ವ್ಯಾಪಕವಾಗಿ ಹಬ್ಬಿರುವ ಮಾರಕ ಕೊರೋನಾ ವೈರಸ್ ದಾಳಿಗೆ ಭಾರತದಲ್ಲಿ ಇದೀಗ ಮೂರನೇ ವ್ಯಕ್ತಿ ಬಲಿಯಾಗಿದ್ದು, ಮಹಾರಾಷ್ಟ್ರದಲ್ಲಿ 64 ವರ್ಷದ ಸೋಂಕು ಪೀಡಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಕೊರೋನಾ ಸೋಂಕಿಗೆ ತುತ್ತಾಗಿ ಮುಂಬೈನ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 64 ವರ್ಷದ ವ್ಯಕ್ತಿ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. 

125ಕ್ಕೆ ಏರಿದ ಸೋಂಕಿತರ ಸಂಖ್ಯೆ
ಇನ್ನು ಭಾರತದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಕೂಡ ದಿನಗಳೆದಂತೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಇದೀಗ ಭಾರತದಲ್ಲಿ ವೈರಸ್ ಸೋಂಕಿತರ ಸಂಖ್ಯೆ 125ಕ್ಕೆ ಏರಿಕೆಯಾಗಿದೆ. ಈ ಪೈಕಿ ಭಾರತದಲ್ಲಿ ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಅಂದರೆ 36 ಮಂದಿ ಸೋಂಕಿತರಿದ್ದು, ಕರ್ನಾಟಕದಲ್ಲಿ 10 ಮಂದಿಗೆ ಸೋಂಕು ತಗುಲಿದೆ. ಉಳಿದಂತೆ ಕೇರಳದಲ್ಲಿ 22, ತೆಲಂಗಾಣದಲ್ಲಿ 4, ದೆಹಲಿಯಲ್ಲಿ 7, ಉತ್ತರ ಪ್ರದೇಶದಲ್ಲಿ 12 ಸೇರಿದಂತೆ ಹಲವು ಭಾಗಗಳಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ.  

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement