ದೇಶ

ಕೊರೋನಾ ವೈರಸ್: ಸೋಂಕಿತರನ್ನು ಗುರುತಿಸಲು ಎಡಗೈ ಮೇಲೆ ಮುದ್ರೆ, 'ಮಹಾ' ಸರ್ಕಾರದ ಕ್ರಮ!

Manjula VN

ಮುಂಬೈ: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಮನೆಯಲ್ಲಿ ಪ್ರತ್ಯೇಕವಾಗಿರಿಸಲಾಗಿರುವ ವ್ಯಕ್ತಿಗಳ ಎಡಗೈ ಮೇಲೆ ಮುದ್ರೆ ಹಾಕಲು ಮಹಾರಾಷ್ಟ್ರ ಸರ್ಕಾರ ನಿರ್ಧಾರ ಕೈಗೊಂಡಿದೆ. 

ಮುದ್ರೆ ಹಾಕುವ ಮೂಲಕ ಸೋಂಕಿತ ವ್ಯಕ್ತಿಗಳನ್ನು ಸುಲಭವಾಗಿ ಗುರುತಿಸಬಬುದು ಎಂದು ಮಹಾರಾಷ್ಟ್ರ ಸರ್ಕಾರ ತಿಳಿಸಿದೆ. 

ಭಾರತದಲ್ಲಿ ಇತರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ, ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ಇಂತಹ ಕ್ರಮ ಕೈಗೊಂಡಿದೆ ಎಂದು ಹೇಳಲಾಗುತ್ತಿದೆ. 

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ನಡೆದ ಉನ್ನತಾಧಿಕಾರಿಹಗಳ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. 

ಕಳೆದ ಕೆ ದಿನಗಳಲ್ಲಿ ಸುಮಾರು 7 ಜನರದಲ್ಲಿ ಸೋಂಕು ಪತ್ತೆಯಾಗಿದ್ದು, ಈ ಸೋಂಕಿತರು ಚಿಕಿತ್ಸಾ ಕೇಂದ್ರಗಳಿಂದ ತಪ್ಪಿಸಿಕೊಂಡಿದ್ದಾರೆ. ಹೀಗಾಗಿ ಮಹಾರಾಷ್ಟ್ರ ಸರ್ಕಾರಕ್ಕೆ ದೊಡ್ಡ ತಲೆನೋವು ಶುರುವಾಗಿದೆ. 

ಸೋಂಕು ತಗುಲಿರುವುದು ಅಪರಾಧವಲ್ಲ. ಆದರೆ, ಅವರಿಗೆ ಸೂಕ್ತ ವೈದ್ಯಕೀಯ ಹಾಗೂ ಮನೋವೈದ್ಯಕೀಯ ಚಿಕಿತ್ಸೆಯ ಅಗತ್ಯವಿದೆ. ಸಾಂಕ್ರಾಮಿಕ ರೋಗಗಳ ಕಾಯ್ದೆಯನ್ನು ಜನರ ಹಿತದೃಷ್ಟಿಯಿಂದ ಜಾರಿಗೆ ತರಲಾಗಿದ್ದು, ಜಿಲ್ಲಾಡಳಿತಗಳು ಇದರ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು

SCROLL FOR NEXT