ಪ್ರಧಾನಿ ನರೇಂದ್ರ ಮೋದಿ 
ದೇಶ

ಕೊರೋನಾವೈರಸ್ ಹಿನ್ನೆಲೆ: ಗುರುವಾರ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ದೇಶದಲ್ಲಿ ಕೊರೋನಾವೈರಸ್ ಸೋಂಕಿತರ ಸಂಖ್ಯೆ 160 ದಾಟುತ್ತಿರುವಂತೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾತ್ರಿ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ನವದೆಹಲಿ: ದೇಶದಲ್ಲಿ ಕೊರೋನಾವೈರಸ್ ಸೋಂಕಿತರ ಸಂಖ್ಯೆ 160 ದಾಟುತ್ತಿರುವಂತೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾತ್ರಿ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಕೊರೋನಾವೈರಸ್ ನಿಂದಾಗಿ ದೇಶದಲ್ಲಿ ಉಂಟಾಗಿರುವ ಪರಿಸ್ಥಿತಿ ಹಾಗೂ ಅದರ ನಿಯಂತ್ರಣಕ್ಕಾಗಿ ಸರ್ಕಾರ ನಡೆಸುತ್ತಿರುವ ಪ್ರಯತ್ನಗಳ ಕುರಿತಾಗಿ ದೇಶವಾಸಿಗಳೊಂದಿಗೆ ಮಾತನಾಡಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ಬುಧವಾರ ತಿಳಿಸಿದೆ. 

ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾತ್ರಿ 8 ಗಂಟೆಗೆ ಕೋವಿಡ್ -19 ಸಂಬಂಧಿತ ಸಮಸ್ಯೆಗಳು ಹಾಗೂ ಅದರ ನಿಯಂತ್ರಣಕ್ಕಾಗಿ ನಡೆಸಲಾಗುತ್ತಿರುವ ಪ್ರಯತ್ನಗಳ ಕುರಿತಾಗಿ ಮಾತನಾಡಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ಟ್ವೀಟ್ ಮಾಡಿದೆ. 

ಮೋದಿ ನೇತೃತ್ವದಲ್ಲಿನ ಉನ್ನತ ಮಟ್ಟದ ಸಭೆ ಕೋವಿಡ್ -19 ನಿಯಂತ್ರಣಕ್ಕಾಗಿ ನಡೆಸಲಾಗುತ್ತಿರುವ ಪ್ರಯತ್ನಗಳ ಪರಾಮರ್ಶನೆ ನಡೆಸಿದ್ದು, ಭಾರತವನ್ನು ಸದೃಢತೆಯನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳ ಕುರಿತಂತೆ ಚರ್ಚಿಸಲಾಯಿತು  ಎಂದು ಮತ್ತೊಂದು ಟ್ವೀಟ್ ನಲ್ಲಿ ಹೇಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT