ದೇಶ

ಕೊರೋನಾ ವೈರಸ್ ತಡೆಗೆ ಕ್ರಮ: ಕೇಂದ್ರ ಸರ್ಕಾರದ ಉದ್ಯೋಗಿಗಳಿಗೆ 3 ಪಾಳಿಯಲ್ಲಿ ಕೆಲಸ ಮಾಡಲು ಸೂಚನೆ! 

Srinivas Rao BV

ಕೊರೋನಾ ವೈರಸ್ ತಡೆಗೆ ಹಲವಾರು ಕ್ರಮಗಳನ್ನು ಕೈಗೊಂಡಿರುವ ಕೇಂದ್ರ ಸರ್ಕಾರ ತನ್ನ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಉದ್ಯೋಗಿಗಳಿಗೆ ಮೂರು ಪಾಳಿಯಲ್ಲಿ ಕೆಲಸ ಮಾಡಲು ಸೂಚಿಸಿದೆ.

ಕೆಲಸದ ಅವಧಿಯನ್ನು ಬದಲಾವಣೆ ಮಾಡಿರುವ ಕೇಂದ್ರ ಸಿಬ್ಬಂದಿ ಹಾಗೂ ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಸಚಿವಾಲಯ, ಗ್ರೂಪ್ ಬಿ ಹಾಗೂ ಸಿ ಉದ್ಯೋಗಿಗಳ ಪೈಕಿ ಶೇ.50 ರಷ್ಟು ಮಂದಿ ಪ್ರತಿ ದಿನ ಕಚೇರಿಗೆ ಹೋಗಬೇಕು ಹಾಗೂ ಉಳಿದ ಶೇ.50 ರಷ್ಟು ಜನರು ಮನೆಯಿಂದಲೇ ಕಾರ್ಯನಿರ್ವಹಣೆ ಮಾಡಬೇಕೆಂದು ಸೂಚನೆ ನೀಡಿದೆ. 

ಉದ್ಯೋಗಿಗಳ ಕೆಲಸದ ಅವಧಿಯನ್ನು ಬಲದವಾಣೆ ಮಾಡಬೇಕು ಎಂಬುದಾಗಿಯೂ ಸಚಿವಾಲಯ ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕೊರೋನಾ ವೈರಸ್ ನಿಂದ ಉಂಟಾಗಿರುವ ಪರಿಸ್ಥಿತಿಯ ಬಗ್ಗೆ ಗ್ರೂಪ್ ಆಫ್ ಮಿನಿಸ್ಟರ್ಸ್ (ಜಿಒಎಂ) ಸಭೆ ನಡೆಸಿದ್ದು, ಪ್ರಧಾನಿ ಮೋದಿ ರಾತ್ರಿ 8ಕ್ಕೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.

SCROLL FOR NEXT