ಸಾಂದರ್ಭಿಕ ಚಿತ್ರ 
ದೇಶ

ತನ್ನ ಅಧೀನ ಕಚೇರಿಗಳಿಗೆ ಭೇಟಿ ನೀಡದಂತೆ ಜನರಿಗೆ ನೌಕರರ ಭವಿಷ್ಯನಿಧಿ ಸಂಸ್ಥೆ ಮನವಿ

ಕೊರೋನಾ ವೈರಸ್‌ನ ಹರಡುವಿಕೆ ತಡೆಯುವ ದೃಷ್ಟಿಯಿಂದ ತನ್ನ ಅಧೀನದ ಕಚೇರಿಗಳಿಗೆ ಭೇಟಿ ನೀಡದಂತೆ ಜನರಿಗೆ ಮನವಿ ಮಾಡಿರುವ ಭವಿಷ್ಯ ನಿಧಿ ಸಂಸ್ಥೆ(ಇಪಿಎಫ್‌ಒ), ಪರ್ಯಾಯ ಡಿಜಿಟಲ್‍ ವ್ಯವಸ್ಥೆಗಳನ್ನು ಬಳಸಿಕೊಳ್ಳುವಂತೆ ಮನವಿ ಮಾಡಿದೆ.

ನವದೆಹಲಿ: ಕೊರೋನಾ ವೈರಸ್‌ನ ಹರಡುವಿಕೆ ತಡೆಯುವ ದೃಷ್ಟಿಯಿಂದ ತನ್ನ ಅಧೀನದ ಕಚೇರಿಗಳಿಗೆ ಭೇಟಿ ನೀಡದಂತೆ ಜನರಿಗೆ ಮನವಿ ಮಾಡಿರುವ ಭವಿಷ್ಯ ನಿಧಿ ಸಂಸ್ಥೆ(ಇಪಿಎಫ್‌ಒ), ಪರ್ಯಾಯ ಡಿಜಿಟಲ್‍ ವ್ಯವಸ್ಥೆಗಳನ್ನು ಬಳಸಿಕೊಳ್ಳುವಂತೆ ಮನವಿ ಮಾಡಿದೆ.

ಜನರು ದೂರವಾಣಿ ಸಂಖ್ಯೆ 011-27371136 ಮೂಲಕ ವಿಚಾರಣೆ ನಡೆಸಬಹುದಾಗಿದೆ. ಅಲ್ಲದೆ, ಕುಂದುಕೊರತೆಗಳ ಪರಿಹಾರಕ್ಕೆ ಇ-ಮೇಲ್ ವಿಳಾಸ ro.delhicentral@epfindia gov.in ಅನ್ನೂ ಸಂಪರ್ಕಿಸಬಹುದು ಎಂದು ದೆಹಲಿ ಇಪಿಎಫ್‌ಒ (ಕೇಂದ್ರ) ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತ ಅಲೋಕ್ ಯಾದವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಧೀನದಲ್ಲಿರುವ ಇಪಿಎಫ್‌ಒ, ವಾಟ್ಸಪ್ ಸಂದೇಶಗಳಿಗಾಗಿ 8595520478 ಸಂಖ್ಯೆಯನ್ನು ಸಹ ಒದಗಿಸಿದೆ.

ಎಲ್ಲಾ ಇಪಿಎಫ್‌ಒ ಕಚೇರಿಗಳಲ್ಲಿ ಸ್ಯಾನಿಟೈಸರ್ ಮತ್ತು ಮುಖಗವಸುಗಳು ಲಭ್ಯವಿವೆ ಎಂದು ಹೇಳಿಕೆ ತಿಳಿಸಿದೆ.

ಕೊರೋನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾರಣಾಂತಿಕ ರೋಗ ತಡೆಗೆ ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!