ಸಾಂದರ್ಭಿಕ ಚಿತ್ರ 
ದೇಶ

ಸ್ವಾತಂತ್ರ್ಯ ನಂತರದ ಭಾರತದಲ್ಲಿ ನಡೆದ ಗಲ್ಲು ಶಿಕ್ಷೆಗಳ ಇತಿಹಾಸ

2012ರ ನಿರ್ಭಯಾ ಅತ್ಯಾಚಾರ ಕೊಲೆ ಪ್ರಕರಣದ ನಾಲ್ಕು ಆರೋಪಿಗಳಿಗೆ ಇಂದು ಬೆಳಗ್ಗೆ ಗಲ್ಲು ಶಿಕ್ಷೆ ಜಾರಿಯಾಗಿದೆ.  ಸ್ವಾತಂತ್ರ್ಯನಾಂತರದ ಭಾರತದಲ್ಲಿ ಇದೇ ಮೊದಲ ಬಾರಿಗೆ ನಾಲ್ಕು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ.

ನವದೆಹಲಿ: 2012ರ ನಿರ್ಭಯಾ ಅತ್ಯಾಚಾರ ಕೊಲೆ ಪ್ರಕರಣದ ನಾಲ್ಕು ಆರೋಪಿಗಳಿಗೆ ಇಂದು ಬೆಳಗ್ಗೆ ಗಲ್ಲು ಶಿಕ್ಷೆ ಜಾರಿಯಾಗಿದೆ.  ಸ್ವಾತಂತ್ರ್ಯನಾಂತರದ ಭಾರತದಲ್ಲಿ ಇದೇ ಮೊದಲ ಬಾರಿಗೆ ನಾಲ್ಕು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ.

ಕಳೆದ ಮೂರು ದಶಕಗಳಲ್ಲಿ ಯಾಕೂಬ್ ಮೆಮನ್, ಅಫ್ಜಲ್ ಗುರು ಮತ್ತು ಅಜ್ಮಲ್ ಕಸಬ್ ಸೇರಿದಂತೆ ದೇಶದಲ್ಲಿ ಒಟ್ಟು 16 ಅಪರಾಧಿಗಳನ್ನು ಗಲ್ಲಿಗೇರಿಸಲಾಗಿದೆ.

2013 ಫೆಬ್ರವರಿ 9 ರಂದು  ತಿಹಾರ್ ಜೈಲಿನಲ್ಲಿ ಅಪ್ಜಲ್ ಗುರು ನನ್ನು ಗಲ್ಲಿಗೇರಿಸಲಾಯಿತು. 2015ರಲ್ಲಿ ಉಗ್ರ ಹಾಗೂ 1993 ರ ಮುಂಬೈ ಸರಣಿ ಸ್ಪೋಟದ ರುವಾರಿ ಯಾಕೂಬ್ ಮೆನನ್ ನನ್ನು ಗಲ್ಲಿಗೆ ಏರಿಸಲಾಗಿತ್ತು.

2004ರಲ್ಲಿ ಅತ್ಯಾಚಾರ ಆಪರಾಧಿ ಧನಂಜಯ ಚಟರ್ಜಿ, 2012ರಲ್ಲಿ ಉಗ್ರ ಮಹಮ್ಮದ್ ಅಜ್ಮಲ್ ಅಮಿರ್ ಖಾನ್ ನಿಗೆ ಮರಣ ದಂಡನೆ ವಿಧಿಸಲಾಯಿತು. 

1989 ರಲ್ಲಿ  ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ಅವರ ಹತ್ಯೆ ಮಾಡಿದ್ದ ಸತ್ವಂತ್ ಸಿಂಗ್ ಮತ್ತು ಕೇಹರ್ ಸಿಂಗ್ ಗಲ್ಲು ಶಿಕ್ಷೆಗೊಳಗಾಗಿದ್ದರು.

1982ರ ಜನವರಿಯಲ್ಲಿ ಸಹೋದರ ಮತ್ತು ಸಹೋದರಿಯರ ಅಪಹರಣ ಮತ್ತು ಕೊಲೆ ಪ್ರಕರಣದಲ್ಲಿ  ರಂಗ ಮತ್ತು ಬಿಲ್ಲಾ ಎಂಬುವರನ್ನು ತಿಹಾರ್ ಜೈಲಿನಲ್ಲೇ ನೇಣುಗಂಬಕ್ಕೇರಿಸಲಾಯಿತು.
ಇದೀಗ ನಿರ್ಭಯಾ ಪ್ರಕರಣದ ಫಪರಾಧಿಗಳನ್ನು ಗಲ್ಲಿಗೆ ಏರಿಸುವ ಮೂಲಕ ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ನಾಲ್ಕು ಜನರನ್ನು ಒಟ್ಟಿಗೆ ಗಲ್ಲಿಗೇರಿಸಿದ ಅಪರೂಪದ ಘಟನೆ ಇದಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT