ದುಶ್ಯಂತ್ ಸಿಂಗ್ 
ದೇಶ

ಕನ್ನಿಕಾ ಕಪೂರ್ ಪಾರ್ಟಿಯಲ್ಲಿ ಪಾಲ್ಗೊಂಡ ವಸುಂಧರ ರಾಜೇ ಮತ್ತು ಪುತ್ರ ಸಂಸದ ದುಶ್ಯಂತ್ ಸಿಂಗ್ ಈಗ ಸ್ವಯಂ ನಿರ್ಬಂಧದಲ್ಲಿ!

 ಮಹತ್ವದ ಬೆಳವಣಿಗೆಯಲ್ಲಿ  ಬಿಜೆಪಿ ಸಂಸದ ದುಶ್ಯಂತ್ ಸಿಂಗ್ ಮತ್ತು ಅವರ ತಾಯಿ,ರಾಜಸ್ಥಾನ ಮಾಜಿ ಸಿಎಂ ವಸುಂಧರಾ ರಾಜೆ ಸ್ವಯಂ ನಿರ್ಬಂಧ ವಿಧಿಸಿಕೊಂಡಿದ್ದಾರೆ. ಹಾಗೆಯೇ ಈ ಸುದ್ದಿ ತಿಳಿಯುತ್ತಿದ್ದಂತೆ ಸಂಸತ್ ಅಧಿವೇಶನ ಕೂಡ ಮೊಟಕಾಗುವ ಸಾಧ್ಯತೆ ಇದೆ.

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ  ಬಿಜೆಪಿ ಸಂಸದ ದುಶ್ಯಂತ್ ಸಿಂಗ್ ಮತ್ತು ಅವರ ತಾಯಿ,ರಾಜಸ್ಥಾನ ಮಾಜಿ ಸಿಎಂ ವಸುಂಧರಾ ರಾಜೆ ಸ್ವಯಂ ನಿರ್ಬಂಧ ವಿಧಿಸಿಕೊಂಡಿದ್ದಾರೆ. ಹಾಗೆಯೇ ಈ ಸುದ್ದಿ ತಿಳಿಯುತ್ತಿದ್ದಂತೆ ಸಂಸತ್ ಅಧಿವೇಶನ ಕೂಡ ಮೊಟಕಾಗುವ ಸಾಧ್ಯತೆ ಇದೆ.

"ಲಖನೌದಲ್ಲಿದ್ದಾಗ, ನಾನು ನನ್ನ ಮಗ ದುಶ್ಯಂತ್ ಮತ್ತು ಅಳಿಯನೊಂದಿಗೆ ಭೋಜನಕೂಟದಲ್ಲಿ ಭಾಗವಹಿಸಿದ್ದೆ. ದುರದೃಷ್ಟವಶಾತ್ ಕೋವಿಡ್ 19 ಸೋಂಕಿತರಾದ ಗಾಯಕಿ ಕನ್ನಿಕಾ ಕಪೂರ್ ಸಹ  ಬಾಗವಹಿಸಿದ್ದರು. . ಸಾಕಷ್ಟು ಎಚ್ಚರಿಕೆಯಿಂದ, ನನ್ನ ಮಗ ಮತ್ತು ನಾನು ತಕ್ಷಣ ಸ್ವಯಂ ನಿರ್ಬಂಧ ಹಾಕಿಕೊಂಡಿದ್ದೇವೆ. ಮತ್ತು ನಾವು ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುತ್ತಿದ್ದೇವೆ. "

ಲಖನೌನಲ್ಲಿ ಬಾಲಿವುಡ್ ಗಾಯಕಿ ಕನ್ನಿಕಾ ಕಪೂರ್ ಖಾಸಗಿ ಹೋಟೆಲ್ ನಲ್ಲಿ ಪಾರ್ಟಿ ಆಯೋಜಿಸಿದ್ದರು. ಅವರ ಪಾರ್ಟಿಯಲ್ಲಿ ವಸುಂಧರಾ ರಾಜೆ ಹಾಗೂ ಅವರ ಪುತ್ರ ಸೇರಿ ಸುಮಾರು ಐನೂರು ಮಂದಿ ಗಣ್ಯರು ಭಾಗವಹಿಸಿದ್ದರು. 

ಝಲ್ವಾರ್ ಸಂಸದರಾದ  ದುಶ್ಯಂತ್ ಸಿಂಗ್ ಅವರು ಮರುದಿನ ಸಂಸತ್ತಿಗೆ ಹಾಜರಾಗಿದ್ದರು ಮತ್ತು ಗುರುವಾರ ಕೇಂದ್ರ ಸಭಾಂಗಣದಲ್ಲಿ ಸುರೇಂದ್ರ ನಗರ್, ನಿಶಿಕಾಂತ್ ಮತ್ತು ಮನೋಜ್ ತಿವಾರಿ ಅವರೊಂದಿಗೆ ಕುಳಿತಿದ್ದರು ಎಂದು ವರದಿಯಾಗಿದೆ.

ಗಾಯಕಿ ಕನ್ನಿಕಾ ಕಪೂರ್ ಕೋವಿಡ್ -19 ಸೋಂಕಿನಿಂದಾಗಿ ಲಖನೌ ಆಸ್ಪತ್ರೆಯಲ್ಲಿ ಚಿಕಿತ್ಸೆ ಹೊಂದುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT