ಕೊರೋನಾ ವೈರಸ್ ಗೆ ರಾಜಸ್ಥಾನದಲ್ಲಿ ಮತ್ತೊಂದು ಬಲಿ 
ದೇಶ

ಕೊರೋನಾ ವೈರಸ್: ಜೈಪುರದಲ್ಲಿ ಇಟಲಿ ಪ್ರಜೆ ಸಾವು, ಭಾರತದಲ್ಲಿ 5ಕ್ಕೇರಿದ ಸಾವಿನ ಸಂಖ್ಯೆ

ವಿಶ್ವಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಗೆ ಭಾರತದಲ್ಲಿ ಮತ್ತೋರ್ವ ಸೋಂಕಿತ ವ್ಯಕ್ತಿ ಸಾವನ್ನಪ್ಪಿದ್ದು, ಆ ಮೂಲಕ ಕೊರೋನಾ ವೈರಸ್ ಸಾವಿನ ಸಂಖ್ಯೆ 5ಕ್ಕೇರಿದೆ.

ಜೈಪುರ: ವಿಶ್ವಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಗೆ ಭಾರತದಲ್ಲಿ ಮತ್ತೋರ್ವ ಸೋಂಕಿತ ವ್ಯಕ್ತಿ ಸಾವನ್ನಪ್ಪಿದ್ದು, ಆ ಮೂಲಕ ಕೊರೋನಾ ವೈರಸ್ ಸಾವಿನ ಸಂಖ್ಯೆ 5ಕ್ಕೇರಿದೆ.

ಹೌದು.. ಮಾರಣಾಂತಿಕ ಕೊರೋನಾ ವೈರಸ್‌ಗೆ ಭಾರತದಲ್ಲಿ 5ನೇ ಬಲಿಯಾಗಿದ್ದು, ರಾಜಸ್ತಾನದ ಜೈಪುರದಲ್ಲಿ ಚಿಕಿತ್ಸೆಯಲ್ಲಿದ್ದ 69 ವರ್ಷದ ಇಟಲಿ ಪ್ರಜೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ. ಪ್ರವಾಸಕ್ಕೆಂದು ಮೂರು ದಿನಗಳ ಹಿಂದೆ ಭಾರತಕ್ಕೆ ಆಗಮಿಸಿದ್ದ ಇವರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಕೂಡಲೇ ವಿಮಾನ ನಿಲ್ದಾಣದಿಂದ ನೇರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.

ಈ ಸಾವಿನೊಂದಿಗೆ ಭಾರತದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 5ಕ್ಕೇರಿದ್ದು, ಸೋಂಕಿತರ ಸಂಖ್ಯೆ ದೇಶದಲ್ಲಿ 195ಕ್ಕೆ ಏರಿಕೆಯಾಗಿದೆ. ಕೊರೋನಾ ಶಂಕಿತರನ್ನುಆಸ್ಪತ್ರೆಯಲ್ಲಿರಿಸಿ ನಿಗಾ ವಹಿಸಲು ಸಾಧ್ಯವಾಗದ ಕಾರಣ ಅವರನ್ನು ಮನೆಯಲ್ಲೇ ಇರಿಸಿ, 14 ದಿನಗಳ ಕಾಲ ಪ್ರತ್ಯೇಕವಾಗಿರಲು ಸೂಚಿಸಲಾಗಿದೆ. ಅಲ್ಲದೆ, ಮನೆಯಲ್ಲೇ ಸ್ವನಿರ್ಬಂಧಕ್ಕೆ ಸರ್ಕಾರ ಆದೇಶಿಸಿದೆ. 

ಅಂತೆಯೇ ವಿಶ್ವಾದ್ಯಂತ ಸುಮಾರು 10,000ಕ್ಕೂ ಹೆಚ್ಚು ಜನ ಬಲಿಯಾಗಿದ್ದು, 2 ಲಕ್ಷಕ್ಕೂ ಅಧಿಕ ಜನರಿಗೆ ಕೊರೋನಾ ಸೋಂಕು ತಗುಲಿದೆ. ಇನ್ನು ಅಮೆರಿಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 217ಕ್ಕೆ ಏರಿಕೆಯಾಗಿದೆ. 14,366   ಜನರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಇಟಲಿಯಲ್ಲಿ ಬುಧವಾರ ಒಂದೇ ದಿನ 475ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ. ಚೀನಾದ ಬಳಿಕ ಅತಿಹೆಚ್ಚು ಕೊರೋನಾ ಸೋಂಕಿತರ ದೇಶ ಎಂಬ ಕುಖ್ಯಾತಿಯನ್ನು ಇಟಲಿ ಪಡೆದುಕೊಂಡಿದೆ. 

ಇತ್ತ ಇರಾನ್​ನಲ್ಲಿ ಗುರುವಾರ ಒಂದೇ ದಿನ 149 ಜನ ಕೊರೋನಾಗೆ ಬಲಿಯಾಗಿದ್ದಾರೆ. ಇದುವರೆಗೂ ಇರಾನ್​ನಲ್ಲಿ ಸಾವನ್ನಪ್ಪಿದವರ ಸಂಖ್ಯೆ 1284ಕ್ಕೆ ಏರಿಕೆಯಾಗಿದೆ. ಇಟಲಿ, ಸ್ಪೇನ್​, ಅಮೆರಿಕ ಸೇರಿದಂತೆ ಜಗತ್ತಿನ ಎಲ್ಲಾ ದೇಶಗಳಲ್ಲೂ ದಿನದಿಂದ ದಿನಕ್ಕೆ ಪ್ರಕರಣಗಳು ಹೆಚ್ಚುತ್ತಿದ್ದು ಆರ್ಥಿಕತೆಯ ಮೇಲೂ ದೊಡ್ಡ ಪರಿಣಾಮ ಬೀರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ’; ಸಿಜೆಪಿ ಪ್ರತಿಭಟನೆಗೆ ರಾಹುಲ್‌ ಗಾಂಧಿ ಬೆಂಬಲ

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಬಂಡೀಪುರದಲ್ಲಿ ದಂತವಿಲ್ಲದ ಆನೆಯ ಕಳೇಬರ ಪತ್ತೆ; ನಟೋರಿಯಸ್ ಬವಾರಿಯಾ ಗ್ಯಾಂಗ್‌ ನಂಟಿನ ಶಂಕೆ

ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

'ಅವನನ್ನು ಹಾಳು ಮಾಡಿದ್ದೇ ಟೀಂ ಇಂಡಿಯಾ ಮ್ಯಾನೇಜ್‌ಮೆಂಟ್'!: ವೈಭವ್ ಸೂರ್ಯವಂಶಿ ಕುರಿತು ಗಂಭೀರ್‌ ವಿರುದ್ಧ ವಿಶ್ವಕಪ್‌ ವಿಜೇತ ಆಟಗಾರ ಕಿಡಿ