ಬಿಎಸ್ ಎನ್ ಎಲ್ ನಿಂದ ತಿಂಗಳ ಕಾಲ ಉಚಿತ ಬ್ರಾಡ್ ಬ್ಯಾಂಡ್ ಸೇವೆ
ಸರ್ಕಾರಿ ಸ್ವಾಮ್ಯದ ಬಿಎಸ್ ಎನ್ ಎಲ್ ಲ್ಯಾಂಡ್ ಲೈನ್ ಗ್ರಾಹಕರು ಮತ್ತು ಹೊಸ ಗ್ರಾಹಕರು 'ಮನೆಯಿಂದಲೇ ತಮ್ಮ ಕೆಲಸ ಮಾಡಲು ಅನುಕೂಲವಾಗುವಂತೆ ಒಂದು ತಿಂಗಳ ಉಚಿತ ಬ್ರಾಡ್ ಬ್ಯಾಂಡ್ ಸೇವೆ ಒದಗಿಸುವುದಾಗಿ ಘೋಷಣೆ ಮಾಡಿದೆ
ನವದೆಹಲಿ: ಸರ್ಕಾರಿ ಸ್ವಾಮ್ಯದ ಬಿಎಸ್ ಎನ್ ಎಲ್ ಲ್ಯಾಂಡ್ ಲೈನ್ ಗ್ರಾಹಕರು ಮತ್ತು ಹೊಸ ಗ್ರಾಹಕರು 'ಮನೆಯಿಂದಲೇ ತಮ್ಮ ಕೆಲಸ ಮಾಡಲು ಅನುಕೂಲವಾಗುವಂತೆ ಒಂದು ತಿಂಗಳ ಉಚಿತ ಬ್ರಾಡ್ ಬ್ಯಾಂಡ್ ಸೇವೆ ಒದಗಿಸುವುದಾಗಿ ಘೋಷಣೆ ಮಾಡಿದೆ
ಕೊರೋನಾ ಸೊಂಕು ದೇಶದಲ್ಲಿ ಆತಂಕ ಹೆಚ್ಚಿರುವ ಹಿನ್ನೆಲೆಯಲ್ಲಿ ಬಹುತೇಕ ಕಂಪೆನಿಗಳು ಸಿಬ್ಬಂದಿಗೆ 'ವರ್ಕ್ ಫ್ರಮ್ ಹೋಮ್'ಗೆ ಸೂಚನೆ ನೀಡಿದ್ದು, , ಈ ಹಿನ್ನೆಲೆಯಲ್ಲಿ ಬಿಎಸ್ ಎನ್ ಎಲ್ ಈ ಕ್ರಮಕ್ಕೆ ಮುಂದಾಗಿದೆ .
ಹೊಸ ಗ್ರಾಹಕರು ಕಾಪರ್ ಕೇಬಲ್ ಆಧಾರಿತ ಸಂಪರ್ಕವನ್ನು ಪಡೆದುಕೊಂಡಲ್ಲಿ ಅದಕ್ಕೆ ಇನ್ ಸ್ಟಲೇಷನ್ ಶುಲ್ಕ ಕೂಡ ಪಾವತಿಸಬೇಕಿಲ್ಲ . ಆದರೆ ಈ ಸೇವೆ ಪಡೆಯಲು ಮೋಡೆಮ್ ಖರೀದಿಸಬೇಕಾಗುತ್ತದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.