ದೇಶ

ನ್ಯಾಯ ದೊರೆತರೂ ಮತ್ತೆ ಸುಪ್ರೀಂಕೋರ್ಟ್ ಕದತಟ್ಟಿದ ನಿರ್ಭಯಾ ತಾಯಿ!

Shilpa D

ನವದೆಹಲಿ: ನಿರ್ಭಯಾ ಅತ್ಯಾಚಾರಿಗಳಿಗೆ  ಇಂದು ಬೆಳಗ್ಗೆ ತಿಹಾರ್ ಜೈಲಿನಲ್ಲಿ ಮರಣದಂಡನೆ ವಿಧಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ನಿರ್ಭಯಾ ತಾಯಿ ಆಶಾದೇವಿ, ತಡವಾಗಿಯಾದರೂ ನ್ಯಾಯ ಸಿಕ್ಕಿದೆ, ಆದರೂ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತೇನೆ ಎಂದಿದ್ದಾರೆ.

ನಿರ್ಭಯಾ ಪ್ರಕರಣದಲ್ಲಿ ಕಾನೂನು ಹೋರಾಟ ಮುಂದುವರೆಸುತ್ತೇನೆ. ಭವಿಷ್ಯದಲ್ಲಿ ಇಂತಹ ಪ್ರಕರಣಗಳಲ್ಲಿ ಅಪರಾಧಿಗಳು ಯಾವುದೇ ತಂತ್ರಗಳನ್ನು ಹೂಡಿ ಶಿಕ್ಷೆಯನ್ನು ವಿಳಂಬ ಮಾಡದಂತೆ ಮಾರ್ಗಸೂಚಿ ಹೊರಡಿಸುವಂತೆ ಸುಪ್ರಿಂಕೋರ್ಟ್ ನಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ಮಾರ್ಚ್ 21 ರಂದು ಈ ಬಗ್ಗೆ ವಿಚಾರಣೆ ನಡೆಯಲಿದೆ ಎಂದು ತಿಳಿಸಿದ್ದಾರೆ.

8 ವರ್ಷಗಳಿಂದ ನ್ಯಾಯಕ್ಕಾಗಿ ಅಲೆದಾಡಿದ್ದೇನೆ. ಈ ದಿನ ದೇಶದ ಹೆಣ್ಣು ಮಕ್ಕಳಿಗೆ ನ್ಯಾಯಾ ಸಿಕ್ಕಿದೆ. ನ್ಯಾಯಾಂಗ, ಸರ್ಕಾರ, ಭಾರತದ ಪ್ರತಿಯೊಬ್ಬ ನಾಗರಿಕನಿಗೂ  ಈ ಸಂದರ್ಭದಲ್ಲಿ ಧನ್ಯವಾದ ಅರ್ಪಿಸುತ್ತೇನೆ. ಅಪರಾಧಿಗಳಿಗೆ ಮರಣ ದಂಡಣೆ ಜಾರಿಯಾದ ವಿಚಾರ ತಿಳಿದಾಕ್ಷಣ ಮಗಳ ಫೋಟೋ ತಬ್ಬಿಕೊಂಡೆ ಎಂದು ಭಾವುಕರಾದರು.

23 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯನ್ನು ಡಿಸೆಂಬರ್ 16, 2012ರಂದು ಬಾಲಾಪರಾಧಿ ಸೇರಿದಂತೆ ಒಟ್ಟು ಆರು ಮಂದಿ ಪೈಶಾಚಿಕವಾಗಿ ಅತ್ಯಾಚಾರ ವಸಗಿ ಕೊಲೆಗೈದು ವಿಕೃತಿ ಮೆರೆದಿದ್ದರು. 

SCROLL FOR NEXT