ದೇಶ

ಮುಂಬೈ, ಪುಣೆ, ನಾಗಪುರ್ ದಲ್ಲಿ ಕಚೇರಿಗಳು ಬಂದ್: ಮಹಾ ಸಿಎಂ ಉದ್ಧವ್ ಠಾಕ್ರೆ

Lingaraj Badiger

ಮುಂಬೈ: ಕೊರೋನಾ ವೈರಸ್ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಂಡಿರುವ ಮಹಾರಾಷ್ಟ್ರ ಸರ್ಕಾರ, ಮುಂಬೈ, ಪುಣೆ ಮತ್ತು ನಾಗಪುರ್ ಸೇರಿದಂತೆ ರಾಜ್ಯಾದ್ಯಂತ ಪ್ರಮುಖ ನಗರಗಳಲ್ಲಿನ ಎಲ್ಲಾ ಕಚೇರಿಗಳನ್ನು ಮಾರ್ಚ್ 31ರ ವರೆಗೆ ಬಂದ್ ಮಾಡುವಂತೆ ಶುಕ್ರವಾರ ಆದೇಶಿಸಿದೆ.

ಮುಂಬೈ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ, ಪುಣೆ, ಪಿಂಪ್ರಿ ಚಿಂಚವಾಡ ಮತ್ತು ನಾಗಪುರ್ ದಲ್ಲಿ ಕಚೇರಿಗಳನ್ನು ಬಂದ್ ಮಾಡಲಾಗುತ್ತಿದೆ. ಸರ್ಕಾರ ಕಚೇರಿಗಳಲ್ಲಿ ಶೇ. 25ರಷ್ಟು ಸಿಬ್ಬಂದಿ ಮಾತ್ರ ಕಾರ್ಯನಿರ್ವಹಸಲಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಹೇಳಿದ್ದಾರೆ.

ಇನ್ನು ಅಗತ್ಯ ಸೇವೆಗಳನ್ನು ಪೂರೈಸಲಾಗುವುದು ಎಂದು ಪರಿಸರ ಸಚಿವ ಆದಿತ್ಯ ಠಾಕ್ರೆ ಅವರು ಟ್ವೀಟ್ ಮಾಡಿದ್ದು, ದಿನಸಿ, ಹಾಲು ಮತ್ತು ಇತರೆ ದೈನಂದಿನ ವಸ್ತುಗಳು ಲಭ್ಯವಿರುತ್ತವೆ. ಜನ ಅನಗತ್ಯವಾಗಿ ಮನೆಯಿಂದ ಹೊರಗೆ ಬರುವುದನ್ನು ಕಡಿಮೆ ಮಾಡಬೇಕು ಎಂದು ಕರೆ ನೀಡಿದ್ದಾರೆ.

ಬ್ಯಾಂಕ್, ಸಾರ್ವಜನಿಕ ಸಾರಿಗೆ ಹಾಗೂ ಇತರೆ ಕೆಲವು ಅಗತ್ಯ ಸೇವೆಗಳನ್ನು ಹೊರತುಪಡಿಸಿ ಮುಂಬೈ, ಪುಣೆ, ನಾಗಪುರ್, ಪಿಂಪ್ರಿ ಚಿಂಚವಾಡ್ ನಲ್ಲಿ ಸಂಪೂರ್ಣ ಬಂದ್ ಮಾಡಲಾಗುತ್ತಿದೆ ಎಂದು ಸಿಎಂ ಉದ್ಧವ್ ಠಾಕ್ರೆ ಸ್ಪಷ್ಟಪಡಿಸಿದ್ದಾರೆ.

SCROLL FOR NEXT