ದೇಶ

ಮೋದಿ  'ಜನತಾ ಕರ್ಫ್ಯೂ'ಗೆ ವಿಶ್ವ ಆರೋಗ್ಯ ಸಂಸ್ಥೆ ಮೆಚ್ಚುಗೆ, ಕೊರೋನಾ ವಿರುದ್ಧ ಹೋರಾಟಕ್ಕೆ ಸಹಾಯ

Lingaraj Badiger

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಜನತಾ ಕರ್ಫ್ಯೂಗೆ ಮೆಚ್ಚುಗೆ ವ್ಯಕ್ತಪಡಿಸಿರುವ ವಿಶ್ವ ಆರೋಗ್ಯ ಸಂಸ್ಥೆಯ ಭಾರತೀಯ ಪ್ರತಿನಿಧಿ ಹೆಂಕ್ ಬೆಕೆಡಮ್ ಅವರು, ಭಾನುವಾರದ ಭಾರತ್ ಬಂದ್ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಸಹಾಯ ಮಾಡಲಿದೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಅವರು ದೇಶಾದ್ಯಾಂತ 'ಜನತಾ ಕರ್ಫ್ಯೂ' ಜಾರಿಗೊಳಿಸಿರುವುದನ್ನು ಮತ್ತು ಸಾಮಾಜಿಕ ಅಂತರ ಅಳವಡಿಸಿಕೊಂಡಿರುವುದನ್ನು ನಾವು ಸ್ವಾಗತಿಸುತ್ತೇವೆ. ಇದರಿಂದ ಕೊರೋನಾ ವೈರಸ್ ಹರಡುವುದನ್ನು ನಿಯಂತ್ರಿಸುವ ಕಾರ್ಯತಂತ್ರದ ಪರಿಣಾಮಕಾರಿ ಅನುಷ್ಠಾನವು ಬಹಳ ದೂರ ಸಾಗಲಿದೆ ಎಂದು ಬೆಕೆಡಮ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೈ ತೊಳೆಯುವುದರ ಜೊತೆಗೆ, ಮಾಸ್ಕ್ ಧರಿಸುವುದು ಸಹ ಕೊರೋನಾ ವೈರಸ್ ಹರಡುವುದನ್ನು ತಡೆಯಲಿದೆ. ನಾವು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕೊರೋನಾ ವಿರುದ್ಧದ ಹೋರಾಟಕ್ಕೆ ಕೈಜೋಡಿಸಬೇಕು ಎಂದು ಬೆಕೆಡಮ್ ಹೇಳಿದ್ದಾರೆ.

ನಿನ್ನೆ ದೇಶವನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ ಅವರು, ಕೊರೋನಾ ವೈರಸ್ ಹರಡುವುದನ್ನು ತಡೆಯಲು ಭಾನುವಾರ ಜನತಾ ಕರ್ಫ್ಯೂಗೆ ಸಹಕರಿಸಬೇಕು. ಅಂದು ಬೆಳಗ್ಗೆ 7 ರಿಂದ ರಾತ್ರಿ 9 ಗಂಟೆಯವರೆಗೆ ಯಾರೂ ಮನೆಯಿಂದ ಹೊರಗೆ ಬರಬಾರದು ಎಂದು ಕರೆ ನೀಡಿದ್ದರು.
 

SCROLL FOR NEXT