ವಸುಂಧರಾ ರಾಜೆ 
ದೇಶ

ಆತಂಕ ನಿವಾರಣೆ: ಮಾಜಿ ಸಿಎಂ ಮತ್ತು ಪುತ್ರನಿಗೆ ಕೊರೋನಾ ಸೋಂಕು ಇಲ್ಲ!

ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿದ್ದ ಬಾಲಿವುಡ್ ಗಾಯಕಿ ಕನ್ನಿಕಾ ಕಪೂರ್ ಅವರ ಜೊತೆ ಕಾಣಿಸಿಕೊಂಡಿದ್ದ ಮಾಜಿ ಸಿಎಂ ವಸುಂಧರಾ ರಾಜೆ ಹಾಗೂ ಅವರ ಪುತ್ರ ದುಶ್ಯಂತ್ ಅವರಿಗೆ ಸೋಂಕು ಹರಡಿಲ್ಲ ಎಂಬುದು ತಿಳಿದುಬಂದಿದೆ. 

ಜೈಪುರ: ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿದ್ದ ಬಾಲಿವುಡ್ ಗಾಯಕಿ ಕನ್ನಿಕಾ ಕಪೂರ್ ಅವರ ಜೊತೆ ಕಾಣಿಸಿಕೊಂಡಿದ್ದ ಮಾಜಿ ಸಿಎಂ ವಸುಂಧರಾ ರಾಜೆ ಹಾಗೂ ಅವರ ಪುತ್ರ ದುಶ್ಯಂತ್ ಅವರಿಗೆ ಸೋಂಕು ಹರಡಿಲ್ಲ ಎಂಬುದು ತಿಳಿದುಬಂದಿದೆ. 

ಈ ಬಗ್ಗೆ ರಾಜಸ್ಥಾನದ ಮಾಜಿ ಸಿಎಂ ವಸುಂಧರಾ ರಾಜೆ ಅವರು ಟ್ವೀಟ್ ಮಾಡಿ ನಾನು ಹಾಗೂ ನನ್ನ ಪುತ್ರ ದುಶ್ಯಂತ್ ಸಿಂಗ್ ಕರೋನಾ ವೈರಸ್ ಸೋಂಕು ತಪಾಸಣೆಗೆ ಒಳಗಾಗಿದ್ದು ನಮ್ಮಲ್ಲಿ ಸೋಂಕು ಇಲ್ಲ ಎಂದು ವೈದ್ಯರು ದೃಢಪಡಿಸಿದ್ದಾಗಿ ಬರೆದುಕೊಂಡಿದ್ದಾರೆ. 

ವಸುಂಧರಾ ರಾಜೆ ಹಾಗೂ ಅವರ ಪುತ್ರನ ರಕ್ತದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ವರದಿಯಲ್ಲಿ ಇಬ್ಬರಿಗೂ ಸೋಂಕು ಹರಡಿಲ್ಲ ಎಂಬ ಮಾಹಿತಿ ಹೊರಬಿದ್ದಿವೆ.

ಇನ್ನು ಸಂಸದ ದುಶ್ಯಂತ್ ಸಿಂಗ್ ಲೋಕಸಭೆಯ ಕಲಾಪದಲ್ಲಿ ಪಾಲ್ಗೊಂಡಿದ್ದರು. ಹೀಗಾಗಿ ಅವರ ಸಂಪರ್ಕಕ್ಕೆ ಬಂದವರಿಗೂ ಸೋಂಕು ಹರಡಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು. ಇದೀಗ ಈ ವರದಿಯಿಂದ ಭೀತಿ ದೂರವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಓಮನ್ ಕರಾವಳಿಯಲ್ಲಿ 11 ಭಾರತೀಯರಿದ್ದ ಹಡಗಿನ ಮೇಲೆ ದಾಳಿಗೆ ಭಾರತ ಖಂಡನೆ; 10 ಜನರ ರಕ್ಷಣೆ, ಓರ್ವ ನಾಪತ್ತೆ

ಅಸ್ಸಾಂ: ರೋಡ್ ರೋಲರ್ ಬಳಸಿ ಸೀಜ್ ಮಾಡಿದ್ದ 472 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶಪಡಿಸಿದ ಸಿಎಂ ಹಿಮಂತ ಬಿಸ್ವಾ ಶರ್ಮಾ! Video

Iranಗೆ ಅಮೆರಿಕಾ ಬಿಗ್ ಶಾಕ್: 140 ಗುರಿಗಳ ಮೇಲೆ ಭಾರೀ ವೈಮಾನಿಕ ದಾಳಿ; Gulf ರಾಷ್ಟ್ರಗಳತ್ತ ಕ್ಷಿಪಣಿ ಹಾರಿಸಿ Tehran ತಿರುಗೇಟು..!

KSRTC ಬಸ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿಗೆ ಧರ್ಮದೇಟು, ವಿಡಿಯೋ ವೈರಲ್

ಬಂಗಾಳ ಕೊಲ್ಲಿಯಲ್ಲಿ ಭೂಕಂಪ: ವಿಶಾಖಪಟ್ಟಣಂನಲ್ಲೂ ನಡುಗಿದ ಭೂಮಿ, ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆ ದಾಖಲು..!