ಸಂಗ್ರಹ ಚಿತ್ರ 
ದೇಶ

ಭಾರತದಲ್ಲಿ ಮುಂದುವರೆದ ಕೊರೋನಾ ಮರಣಮೃದಂಗ: ವೈರಸ್'ಗೆ ಮುಂಬೈ ವ್ಯಕ್ತಿ ಬಲಿ, ಸಾವಿನ ಸಂಖ್ಯೆ 5ಕ್ಕೆ ಏರಿಕೆ

ಚೀನಾ ಬಳಿಕ ಭಾರತದಲ್ಲಿ ಕಾಲಿಟ್ಟಿರುವ ಮಹಾಮಾರಿ ಕೊರೋನಾ ವೈರಸ್ ದಿನದಿಂದ ದಿನಕ್ಕೆ ತನ್ನ ಪ್ರಭಾವವನ್ನು ಹೆಚ್ಚಿಸತೊಡಗಿದ್ದು, ವೈರಸ್'ಗೆ ಇದೀಗ ಮುಂಬೈನಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಇದರಂತೆ ಹೆಮ್ಮಾರಿಗೆ ದೇಶದಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ನವದೆಹಲಿ: ಚೀನಾ ಬಳಿಕ ಭಾರತದಲ್ಲಿ ಕಾಲಿಟ್ಟಿರುವ ಮಹಾಮಾರಿ ಕೊರೋನಾ ವೈರಸ್ ದಿನದಿಂದ ದಿನಕ್ಕೆ ತನ್ನ ಪ್ರಭಾವವನ್ನು ಹೆಚ್ಚಿಸತೊಡಗಿದ್ದು, ವೈರಸ್'ಗೆ ಇದೀಗ ಮುಂಬೈನಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಇದರಂತೆ ಹೆಮ್ಮಾರಿಗೆ ದೇಶದಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಮಹಾರಾಷ್ಟ್ರ ಮೂಲದ 56 ವರ್ಷದ ವ್ಯಕ್ತಿಯೊಬ್ಬರು ವೈರಸ್'ಗೆ ಬಲಿಯಾಗಿದ್ದಾರೆಂದು ತಿಳಿದುಬಂದಿದೆ. ಇದರಂತೆ ದೇಶದಲ್ಲಿ ಮಾರಕ ಕೊರೋನಾ ವೈರಸ್'ಗೆ ಐದು ಮಂದಿ ಬಲಿಯಾದಂತಾಗಿದೆ. 

ವೈರಸ್ ನಿಂದಾಗಿ ವ್ಯಕ್ತಿ ಮಾರ್ಚ್.21 ರಂದು ಮುಂಬೈನ ಹೆಚ್ಎನ್ ರಿಲಯನ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ವ್ಯಕ್ತಿ ಸಾವನ್ನಪ್ಪಿರುವುದಾಗಿ ವರದಿಗಳು ತಿಳಿಸಿವೆ. 

ಮಹಾರಾಷ್ಟ್ರದಲ್ಲಿ ಸೋಂಕು ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಭಾನುವಾರ ಒಂದೇ ದಿನದಲ್ಲಿ ಒಟ್ಟು 10 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಈ ವರೆಗೂ 74 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ

ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿ