ದೇಶ

ಲಾಕ್'ಡೌನ್'ನನ್ನು ಜನರು ಗಂಭೀರವಾಗಿ ಪರಿಗಣಿಸುತ್ತಿಲ್ಲ: ಪ್ರಧಾನಿ ಮೋದಿ ಬೇಸರ

Manjula VN

ನವದೆಹಲಿ: ಲಾಕ್'ಡೌನ್'ನನ್ನು ಜನರು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಬೇಸರ ವ್ಯಕ್ತಪಡಿಸಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಲಾಕ್'ಡೌನ್'ನ್ನು ಜನರು ಗಂಭೀರವಾಗಿ ಪರಿಗಣಿಸುತ್ತಿಲ್ಲ. ದೇಶದಲ್ಲಿ ಕೊರೋನಾವೈರಸ್ ಹತ್ತಿಕ್ಕಲು ಜನರು ಸರ್ಕಾರ ಆದೇಶಗಳನ್ನು ಹಾಗೂ ಸೂಚನೆಗಳನ್ನು ಅನುಸರಿಸಬೇಕೆಂದು ಹೇಳಿದ್ದಾರೆ. 

ವೈರಸ್ ತಡೆಗಟ್ಟಲು ಕೇಂದ್ರ ಸರ್ಕಾರ ನಿರ್ದೇಶಿಸಿರುವ ಕ್ರಮಗಳು ಹಾಗೂ ಮಾರ್ಗಸೂಚಿಗಳನ್ನು ಸೂಕ್ತ ರೀತಿಯಲ್ಲಿ ಅನುಸರಿಸಿ. ಜನರು ಲಾಕ್'ಡೌನ್ ಸೂಕ್ತರೀತಿಯಲ್ಲಿ ಅನುಸರಿಸುತ್ತಿದ್ದಾರೆಯೇ ಎಂಬುದನ್ನು ಪರಿಶೀಲಿಸಿ ಎಂದು ಆಯಾ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ. 

ಲಾಕ್'ಡೌನ್'ನ್ನು ಜನರು ಗಂಭೀರವಾಗಿ ಪರಿಗಣಿಸುತ್ತಿಲ್ಲ. ದಯವಿಟ್ಟು ನಿಮ್ಮನ್ನು ನೀವು ಸಂರಕ್ಷಿಸಿಕೊಳ್ಳಿ. ನಿಮ್ಮ ಕುಟಂಬವನ್ನು ಕಾಪಾಡಿ. ನಿರ್ದೇಶನಗಳನ್ನು ಗಂಭೀರವಾಗಿ ಪರಿಗಣಿಸಿ. ನಿಯಮಗಳು ಹಾಗೂ ಕಾನೂನುಗಳನ್ನು ಸೂಕ್ತ ರೀತಿಯಲ್ಲಿ ಅನುಸರಿಸುವ ಕುರಿತು ಪರಿಶೀಲನೆ ನಡೆಸಿ ಎಂದು ರಾಜ್ಯ ಸರ್ಕಾರಗಳಿಗೆ ಮನವಿ ಮಾಡಿಕೊಂಡಿದ್ದಾರೆ. 

SCROLL FOR NEXT