ದೇಶ

ಮಧ್ಯ ಪ್ರದೇಶ ನೂತನ ಸಿಎಂಗಾಗಿ ಬಿಜೆಪಿ ಹುಡುಕಾಟ, ರೇಸ್ ನಲ್ಲಿ ಶಿವರಾಜ್ ಸಿಂಗ್ ಚೌವ್ಹಾಣ್, ನರೇಂದ್ರ ತೋಮರ್

Lingaraj Badiger

ಭೋಪಾಲ್: ಮಧ್ಯ ಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಎರಡು ದಿನ ಕಳೆದರೂ ಬಿಜೆಪಿ ಇನ್ನು ಸರ್ಕಾರ ರಚನೆಗೆ ಮುಂದಾಗಿಲ್ಲ ಮತ್ತು ಯಾರ ನೇತೃತ್ವದಲ್ಲಿ ಸರ್ಕಾರ ರಚಿಸಬೇಕು ಎಂಬ ಗೊಂದಲದಲ್ಲಿದೆ.

ಸಿಎಂ ಹುದ್ದೆಯ ರೇಸ್ ನಲ್ಲಿ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಅವರು ಮುಂಚೂಣಿಯಲ್ಲಿದ್ದು, ಕೇಂದ್ರ ಕೃಷಿ ಸಚಿವ ನರೇಂದ್ರ ತೋಮರ್ ಅವರ ಹೆಸರು ಸಹ ಪ್ರಮುಖವಾಗಿ ಕೇಳಿಬರುತ್ತಿದೆ.

ಕೇಂದ್ರ ನಾಯಕರು ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ತೋಮರ್ ಅವರನ್ನು ಮುಖ್ಯಮಂತ್ರಿ ಹುದ್ದೆ ಪರಿಗಣಿಸುವ ಸಾಧ್ಯತೆ ಇದೆ ಎಂದು ರಾಜ್ಯ ಬಿಜೆಪಿಯ ಪ್ರಭಾವಿ ವರ್ಗವೊಂದು ಹೇಳುತ್ತಿದೆ. ಆದರೆ ಈ ಬಗ್ಗೆ ಯಾವುದೇ ಖಚಿತ ಮಾಹಿತಿ ಇಲ್ಲ.

ಈಗ ಕಾಂಗ್ರೆಸ್ ಶಾಸಕರ ರಾಜೀನಾಮೆಯಿಂದ ಸುಮಾರು 25 ಸ್ಥಾನಗಳಿಗೆ ನಡೆಯುವ ಉಪ ಚುನಾವಣೆಯಲ್ಲಿ ಬಹುತೇಕ ಸ್ಥಾನಗಳು ತೋಮರ್ ಅವರ ಕ್ಷೇತ್ರದಲ್ಲಿ  ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ವಿಡಿ ಶರ್ಮಾ ಅವರ ಕ್ಷೇತ್ರದಲ್ಲಿ ಬರುತ್ತವೆ. ಹೀಗಾಗಿ ಪ್ರಧಾನಿ ಮೋದಿ ಅವರು ಸಿಎಂ ಹುದ್ದೆಗೆ ತೋಮರ್ ಅವರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

SCROLL FOR NEXT