ದೇಶ

ಸೋಶಿಯಲ್ ಡಿಸ್ಟೆನ್ಸಿಂಗ್ ಗೆ ಮಾದರಿಯಾದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆ! 

Srinivas Rao BV

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಾ.25 ರಂದು ಕೇಂದ್ರ ಸಚಿವ ಸಂಪುಟ ಸಭೆ ನಡೆದಿದ್ದು, ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಸೋಶಿಯಲ್ ಡಿಸ್ಟೆನ್ಸಿಂಗ್ ಗೆ ಮಾದರಿಯಾಗಿದೆ. 

7 ಲೋಕ್ ಕಲ್ಯಾಣ್ ಮಾರ್ಗ್ ನಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಪ್ರಧಾನಿಯವರ ಸಂಪುಟ ಸಹೋದ್ಯೋಗಿಗಳು ಅಂತರ ಕಾಯ್ದುಕೊಂಡು ಕುಳಿತಿದ್ದಾರೆ. ಇದು ಕೊರೋನಾ ಹರಡುತ್ತಿರುವ ಹಿನ್ನೆಲೆಯಲ್ಲಿ ಸಾಮಾನ್ಯ ಜನತೆಗೆ ಮಾದರಿಯಾಗಿದೆ. 

ದೇಶದಲ್ಲಿ ಕೊರೋನಾ ಪೀಡಿತರ ಸಂಖ್ಯೆ 600 ಸಮೀಪಿಸಿದ್ದು, ಮಾ.24 ರ ಮಧ್ಯರಾತ್ರಿಯಿಂದ ಪ್ರಧಾನಿ ನರೇಂದ್ರ ಮೋದಿ 21 ದಿನಗಳ ಕಾಲ ದೇಶಾದ್ಯಂತ ಲಾಕ್ ಡೌನ್ ನ್ನು ಘೋಷಿಸಿದ್ದಾರೆ. 

ಸುಳ್ಳು ಸುದ್ದಿ, ವದಂತಿ ಹಬ್ಬಿಸುವವರ ಮೇಲೆ ನಿಗಾ ಇಡಲು ರಾಜ್ಯಗಳಿಗೆ ಸೂಚನೆ 

ಇದೇ ವೇಳೆ ಲಾಕ್ ಡೌನ್ ಹಿನ್ನೆಲೆಯಲ್ಲಿ ಕೊರೋನಾಗೆ ಸಂಬಂಧಿಸಿದಂತೆ, ಆಹಾರ, ಅಗತ್ಯ ಸೇವೆಗಳಿಗೆ ಸಂಬಂಧಿಸಿದಂತೆ ಸುಳ್ಳು ಸುದ್ದಿ, ವದಂತಿಗಳನ್ನು ಹಬ್ಬಿಸುವವರ ಮೇಲೆ ನಿಗಾ ಇಡಲು ಕೇಂದ್ರ ಗೃಹ ಸಚಿವಾಲಯ ರಾಜ್ಯಗಳಿಗೆ ಸೂಚನೆ ನೀಡಿದೆ.  

SCROLL FOR NEXT