ದೇಶ

ಕೊರೋನಾ ವೈರಸ್: ಮುಂಬೈನಲ್ಲಿ 65 ವರ್ಷದ ಮಹಿಳೆ ಬಲಿ, ಸೋಂಕಿತ ಸಂಖ್ಯೆ 124ಕ್ಕೆ ಏರಿಕೆ

Manjula VN

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಹೊಸದಾಗಿ ಇಬ್ಬರು ವ್ಯಕ್ತಿಗಳಲ್ಲಿ ಗುರುವಾರ ವೈರಸ್ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 124ಕ್ಕೆ ಏರಿಕೆಯಾಗಿದೆ. ಅಲ್ಲದೆ, ವೈರಸ್'ಗೆ ಮುಂಬೈ ಮೂಲದ ಮಹಿಳೆಯೊಬ್ಬರು ಬಲಿಯಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

65 ವರ್ಷದ ಮಹಿಳೆಯೊಬ್ಬರು ಬಲಿಯಾಗಿದ್ದು, ಮಹಿಳೆ ವೈರಸ್ ನಿಂದಲೇ ಸಾವನ್ನಪ್ಪಿದ್ದಾರೆಯೇ ಅಥವಾ ಬೇರಾವ ಕಾರಣಗಳಿಂದ ಸಾವನ್ನಪ್ಪಿದ್ದಾರೆಯೇ ಎಂಬುದರ ಕುರಿತ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಮಹಾರಾಷ್ಟ್ರ ಆರೋಗ್ಯ ಇಲಾಖೆ ಹೇಳಿದೆ. 

ಈ ನಡುವೆ ಮಹಾರಾಷ್ಟ್ರದ ಪುಣೆ ಹಾಗೂ ಮುಂಬೈನಲ್ಲಿ ಇಬ್ಬರು ವ್ಯಕ್ತಿಗಳಲ್ಲಿ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 124ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. 

ವೈರಸ್ ಹರಡುವಿಕೆ ಗಂಭೀರವಾಗುತ್ತಿರುವ ಹಿನ್ನೆಲೆಯಲ್ಲಿ ಕಠಿಣ ಕ್ರಮ ಕೈಗೊಂಡಿರುವ ಮಹಾರಾಷ್ಟ್ರ ಸರ್ಕಾರ 21 ದಿನಗಳ ಕಾಲ ರಾಜ್ಯವನ್ನು ಸಂಪೂರ್ಣವಾಗಿ ಬಂದ್ ಮಾಡಿಸಿದೆ. ಮಾರ್ಚ್ 31ರವರೆಗೂ ರಾಜ್ಯ ಸಂಪೂರ್ಣವಾಗಿ ಲಾಕ್ ಡೌನ್ ಆಗಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ ಎಂದು ವರದಿಗಳು ತಿಳಿಸಿವೆ. 

SCROLL FOR NEXT