ಮಾಲೆಂಗಾವ್: ಇಬ್ಬರು ಕೊರೋನಾ ವೈರಸ್ ಸೋಂಕಿತರನ್ನು ಐಸೋಲೇಷನ್ ಮಾಡಿದಕ್ಕೆ ಎಐಎಂಐಎಂ ಶಾಸಕ ಮತ್ತು ಬೆಂಬಲಿಗರು ವೈದ್ಯರ ಮೇಲೆ ಹಲ್ಲೆ ನಡೆಸಿ ದಾಂದಲೆ ನಡೆಸಿದ್ದಾರೆ.
ಮಾಲೆಂಗಾವ್ ಜನರಲ್ ಆಸ್ಪತ್ರೆಯಲ್ಲಿ ಶಾಸಕ ಮೌಲಾನಾ ಮುಫ್ತಿ ಇಸ್ಮಾಯಿಲ್ ಮತ್ತು ಬೆಂಬಲಿಗರು ವೈದ್ಯರ ಮೇಲೆ ಹಲ್ಲೆ ನಡೆಸಿದ ವಿಡಿಯೋ ಇದೀಗ ವೈರಲ್ ಆಗಿದ್ದು ಆಕ್ರೋಶ ವ್ಯಕ್ತವಾಗುತ್ತಿದೆ. ಕರ್ಫ್ಯೂ ನಡುವೆಯೂ ಶಾಸಕ ಮತ್ತು ಬೆಂಬಲಿಗರು ಹಲ್ಲೆ ನಡೆಸಿದ್ದಾರೆ.
ಇದರಿಂದ ಆಕ್ರೋಶಗೊಂಡ ವೈದ್ಯರ ತಂಡ ಆಸ್ಪತ್ರೆಯ ಮುಂಭಾಗದಲ್ಲಿ ಧರಣಿ ನಡೆಸಿ ಶಾಸಕ ಮತ್ತು ಆತನ ಬೆಂಬಲಿಗರನ್ನು ಬಂಧಿಸುವಂತೆ ಆಗ್ರಹಿಸಿದರು.
ದೇಶದಲ್ಲಿ ಸದ್ಯ ಸೋಂಕಿತರ ಸಂಖ್ಯೆ 722ಕ್ಕೆ ಏರಿಕೆಯಾಗಿದೆ. ಇನ್ನು ಸಾವಿನ ಸಂಖ್ಯೆ 18ಕ್ಕೇರಿದೆ.