ದೇಶ

ಕೋವಿಡ್-19: ಎಲ್ಲಾ ಅಂತಾರಾಷ್ಟ್ರೀಯ ವಿಮಾನಯಾನ ಸೇವೆ ನಿಷೇಧ ಏಪ್ರಿಲ್ 14

Srinivas Rao BV

ನವದೆಹಲಿ: ಕರೋನವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್‍ಡೌನ್‍(ಸಂಪೂರ್ಣ ಸ್ತಬ್ಧ) ಘೋಷಿಸಿರುವ ನಡುವೆಯೇ ಸರ್ಕಾರ ಗುರುವಾರ ಅಂತಾರಾಷ್ಟ್ರೀಯ ವಿಮಾನಯಾನ ಸೇವೆ ನಿಷೇಧ ಏಪ್ರಿಲ್ 14 ರವರೆಗೆ ವಿಸ್ತರಿಸಿದೆ.

ಇದಕ್ಕೂ ಮೊದಲು ಮಾರ್ಚ್ 31 ರವರೆಗೆ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟದ ಮೇಲೆ ನಿಷೇಧ ಹೇರಲಾಗಿತ್ತು. ‘ಮುಂದಿನ ಏಪ್ರಿಲ್ 14 ರ ಸಂಜೆ 6.30ರವರೆಗೆ ನಿಗದಿತ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನ ಸೇವೆಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ಇದು ಅನುಮತಿ ಪಡೆದ ಎಲ್ಲ ಅಂತಾರಾಷ್ಟ್ರೀಯ ಸರಕು ವಿಮಾನಗಳಿಗೆ ಅನ್ವಯಿಸುವುದಿಲ್ಲ  ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ ( ಡಿಜಿಸಿಎ) ಹೇಳಿಕೆಯಲ್ಲಿ ತಿಳಿಸಿದೆ.

SCROLL FOR NEXT