ದೇಶ

ಕೊರೋನಾ ವೈರಸ್ ಸಮುದಾಯದಲ್ಲಿ ಹರಡಿಲ್ಲ, ಪ್ರಮಾಣ ಸ್ಥಿರವಾಗಿದೆ: ಕೇಂದ್ರ ಆರೋಗ್ಯ ಸಚಿವಾಲಯ

Srinivas Rao BV

ನವದೆಹಲಿ: ಭಾರತದಲ್ಲಿ ಕೊರೋನಾ ವೈರಸ್ ಸಂಖ್ಯೆ ಏರಿಕೆಯಾಗುತ್ತಿರುವುದು ಸೋಂಕು ಸಮುದಾಯದಲ್ಲಿ ಹರಡಿದೆಯೇ ಎಂಬ ಆತಂಕ ಮೂಡಿತ್ತು. ಆದರೆ ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟನೆ ನೀಡಿದ್ದು, ಆತಂಕ ದೂರ ಮಾಡಿದೆ. 

ಕೊರೋನಾ ವೈರಸ್ ಕುರಿತು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್, ಕೊರೋನಾ ವೈರಸ್ ಸೋಂಕು ಸಮುದಾಯದಲ್ಲಿ ಹರಡಿರುವುದನ್ನು (community transmission) ತಳ್ಳಿಹಾಕಿದ್ದಾರೆ. "ಸಮುದಾಯದಲ್ಲಿ ಕೊರೋನಾ ಸೋಂಕು ಹರಡಿದೆ ಎನ್ನುವುದಕ್ಕೆ ಈಗಲೂ ದೃಢ ಸಾಕ್ಷ್ಯಗಳಿಲ್ಲ ಎಂದು ಹೇಳಿದ್ದಾರೆ. 

ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದೆ. ಆದರೆ ಹರಡುವಿಕೆ ಪ್ರಮಾಣ ಸ್ಥಿರವಾಗಿದೆ. ಇದು ಆರಂಭಿಕ ಟ್ರೆಂಡ್ ಆಗಿದ್ದು ಕೋವಿಡ್-19 ಸವಾಲನ್ನು ಎದುರಿಸಲು ಭಾರತ ಸನ್ನದ್ಧವಾಗಿದೆ ಎಂದು ತಿಳಿಸಿದ್ದಾರೆ. 

ಅಗತ್ಯ ಸಾಮಗ್ರಿಗಳ ಉತ್ಪಾದನೆ ಹಾಗೂ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಜನತೆ ಭಯ ಪಡುವ ಅಗತ್ಯವಿಲ್ಲ, ವಲಸಿಗ ಕಾರ್ಮಿಕರಿಗೆ ಆಹಾರ ವಸತಿ ನೀಡಲು ರಾಜ್ಯ ಸರ್ಕಾರಗಳು ಕ್ರಮ ಕೈಗೊಂಡಿವೆ ಎಂದು ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿಗಳು ತಿಳಿಸಿದ್ದಾರೆ. 

24 ಗಂಟೆಗಳಲ್ಲಿ 42 ಹೊಸ ಕೊರೋನಾ ಸೋಂಕಿತ ಪ್ರಕರಣಗಳು ವರದಿಯಾಗಿದ್ದು, 2 ಸಾವು ಸಂಭವಿಸಿದೆ. ಕೊರೋನಾ ಸೋಂಕು ಪೀಡಿತರ ಸಂಖ್ಯೆ 649 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. 

SCROLL FOR NEXT