ಕೇರಳದಲ್ಲಿ ಸ್ಯಾನಿಟೈಸರ್ ಸೇವಿಸಿ ವ್ಯಕ್ತಿಯ ಸಾವು!
ಸ್ಯಾನಿಟೈಸರ್ ಸೇವಿಸಿ ವಿಚಾರಣಾಧೀನ ಖೈದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ಪಾಲಕ್ಕಾಡ್ ನಲ್ಲಿ ನಡೆದಿದೆ.
ಪಾಲಕ್ಕಾಡ್: ಸ್ಯಾನಿಟೈಸರ್ ಸೇವಿಸಿ ವಿಚಾರಣಾಧೀನ ಖೈದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ಪಾಲಕ್ಕಾಡ್ ನಲ್ಲಿ ನಡೆದಿದೆ.
ಕಳ್ಳತನದ ಪ್ರಕರಣವೊಂದರಲ್ಲಿ ರಾಮನ್ ಕುಟ್ಟಿ ಎಂಬಾತನನ್ನು ಬಂಧಿಸಲಾಗಿತ್ತು. ಜೈಲಿನ ಖೈದಿಗಳು ಮಾಸ್ಕ್ ಗಳನ್ನು ತಯಾರಿಸುತ್ತಿದ್ದರು. ಈ ವೇಳೆಯಲ್ಲಿ ಈತ ಆತ್ಮಹತ್ಯೆಗೆ ಯತ್ನಿಸಿದ್ದ. ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆತ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.
ಸ್ಯಾನಿಟೈಸರ್ ಸೇವನೆಯಿಂದ ಈ ಖೈದಿ ಮೃತಪಟ್ಟಿದ್ದಾನೆ ಎಂಬ ಶಂಕೆ ಇದೆ. ಈ ಕುರಿತು ವಿಚಾರಣೆ ಪ್ರಾರಂಭಿಸಿದ್ದೇವೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.