ಸಾಂದರ್ಭಿಕ ಚಿತ್ರ 
ದೇಶ

ಮನೆ ಬಾಗಿಲಿಗೆ ಉಚಿತ ಊಟದ ವ್ಯವಸ್ಥೆ ಆರಂಭಿಸಿದ ಕೇರಳ ಸರ್ಕಾರ

ಸಮುದಾಯ ಅಡುಗೆ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ಅವಶ್ಯ ಇರುವವರ ಮನೆ ಬಾಗಿಲಿಗೆ ಉಚಿತವಾಗಿ ಸಿದ್ಧ ಆಹಾರ ಪೂರೈಸುವ ಯೋಜನೆಯನ್ನು ಕೇರಳ ಸರ್ಕಾರ ಆರಂಭಿಸಿದೆ. ಸದ್ಯ 941 ಪಂಚಾಯತ್‌ಗಳಲ್ಲಿ ಸಮುದಾಯ ಅಡುಗೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ತಿರುವನಂತಪುರ: ಸಮುದಾಯ ಅಡುಗೆ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ಅವಶ್ಯ ಇರುವವರ ಮನೆ ಬಾಗಿಲಿಗೆ ಉಚಿತವಾಗಿ ಸಿದ್ಧ ಆಹಾರ ಪೂರೈಸುವ ಯೋಜನೆಯನ್ನು ಕೇರಳ ಸರ್ಕಾರ ಆರಂಭಿಸಿದೆ. ಸದ್ಯ 941 ಪಂಚಾಯತ್‌ಗಳಲ್ಲಿ ಸಮುದಾಯ ಅಡುಗೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಯೋಜನೆ ಘೋಷಿಸಿದ ಮರುದಿನವೇ 43 ಸಮುದಾಯ ಅಡುಗೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. 2,215 ಮನೆಗಳಿಗೆ ಸಿದ್ಧ ಆಹಾರ ಪೂರೈಸಲಾಗಿದ್ದು, ಈ ಪೈಕಿ 1,639 ಮನೆಗಳಿಗೆ ಉಚಿತವಾಗಿ ಆಹಾರ ವಿತರಿಸಲಾಗಿದೆ. ಶುಕ್ರವಾರದ ವೇಳೆಗೆ ಇನ್ನೂ 528 ಸಮುದಾಯ ಅಡುಗೆ ಕೇಂದ್ರಗಳು ಸ್ಥಾಪನೆಯಾಗಿವೆ. ಉಳಿದವು ಇನ್ನೆರಡು ದಿನಗಳಲ್ಲಿ ಸ್ಥಾಪನೆಯಾಗಲಿವೆ ಎಂದು ಖಾಸಗಿಸುದ್ದಿಸಂಸ್ಥೆಯೊಂದು ವರದಿ ಮಾಡಿದೆಕೊರೊನಾ ಲಾಕ್‌ಡೌನ್‌ ಪರಿಣಾಮದಿಂದ ದುರ್ಬಲವರ್ಗದವರು, ಬಡವರು, ನಿರ್ಗತಿಕರಿಗೆ ಆಹಾರ ಸಮಸ್ಯೆಯಾಗಿದೆ ಎಂಬ ವರದಿಗಳನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆ ರೂಪಿಸಲಾಗಿದೆ.

ಆರ್ಥಿಕವಾಗಿ ದುರ್ಬಲರಾಗರುವವರಿಗೆ ಉಚಿತವಾಗಿ ಅಹಾರ ನೀಡಲಾಗುತ್ತಿದೆ. ಸಾರ್ವಜನಿಕರೂ ಇದರ ಪ್ರಯೋಜನೆ ಪಡೆಯಬಹುದಾಗಿದ್ದು, ಅವರಿಗೆ ಸಸ್ಯಾಹಾರಿ ಊಟಕ್ಕೆ ₹ 20 ನಿಗದಿಪಡಿಸಲಾಗಿದೆ. ಕಾರ್ಯಕರ್ತರಿಗೆ ಒಂದು ಊಟಕ್ಕೆ ₹ 5ರಂತೆ ಸೇವಾ ಶುಲ್ಕ ನೀಡಬೇಕಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel