ದೇಶ

ಲಾಕ್ ಡೌನ್ ಅವಧಿಯಲ್ಲಿ ಕೃಷಿ ಚಟುವಟಿಕೆಗಳಿಗೆ ನಿರ್ಬಂಧ ಇಲ್ಲ: ಕೇಂದ್ರ ಸರ್ಕಾರ

Lingaraj Badiger

ನವದೆಹಲಿ: ಕೊರೋನಾ ವೈರಾಣು ಸೋಂಕು ನಿಗ್ರಹ ಸಂಬಂಧ ದೇಶಾದ್ಯಂತ 21 ದಿನಗಳ ಲಾಕ್ ಡೌನ ಘೋಷಿಸಲಾಗಿದ್ದು, ಈ ಸಂದರ್ಭದಲ್ಲಿ ಕೃಷಿ ಚಟುವಟಿಕೆಗಳಿಗೆ ವಿನಾಯಿತಿ ನೀಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಆಹಾರ ಭದ್ರತೆ ಖಚಿತಪಡಿಸಿಕೊಳ್ಳುವುದಕ್ಕಾಗಿ ಲಾಕ್ ಡೌನ್ ಅವಧಿಯಲ್ಲಿ ಕೃಷಿ ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಶನಿವಾರ ಹೇಳಿದ್ದಾರೆ.

ಲಾಕ್ ಡೌನ್ ನಂತರವೂ ದೇಶದಲ್ಲಿ ಯಾವುದೇ ಆಹಾರ ಕೊರತೆಯಾಗದಿರಲಿ ಎಂಬ ಉದ್ದೇಶದಿಂದ ಲಾಕ್ ಡೌನ್ ಅವಧಿಯಲ್ಲೂ ಕೃಷಿಗೆ ಸಂಬಂಧಿಸಿದ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ ಎಂದು ತೋಮರ್ ತಿಳಿಸಿದ್ದಾರೆ.

ಕೃಷಿ ಉತ್ಪನ್ನಗಳನ್ನು ಖರೀದಿಸುವ ಸಂಸ್ಥೆಗಳು, ಎಪಿಎಂಸಿ ಅಥವಾ ಸರ್ಕಾರದ ಮಾನ್ಯತೆ ಪಡೆದು ಕಾರ್ಯನಿರ್ವಹಿಸುತ್ತಿರುವ ಮಂಡಿಗಳಿಗೆ ಲಾಕ್ ಡೌನ್ ನಿಂದ ವಿನಾಯಿತಿ ನೀಡಲಾಗಿದೆ.

SCROLL FOR NEXT