ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್- 19: ಕಳೆದ 24 ಗಂಟೆಗಳ ಅವಧಿಯಲ್ಲಿ ಆರು ಸಾವು, 106 ಹೊಸ ಪ್ರಕರಣಗಳು- ಕೇಂದ್ರ ಆರೋಗ್ಯ ಸಚಿವಾಲಯ

ಕೋವಿಡ್ -19 ಸೋಂಕಿನಿಂದ  ಕಳೆದ 24 ಗಂಟೆಗಳ ಅವಧಿಯಲ್ಲಿ ಆರು ರಾಜ್ಯಗಳಲ್ಲಿ ಆರು ಸಾವಿನ ಪ್ರಕರಣಗಳು ವರದಿಯಾಗಿದ್ದು, 106 ಮಂದಿಗೆ ಹೊಸದಾಗಿ ಸೋಂಕು ತಗುಲಿರುವುದು ದೃಢಪಟ್ಟಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ

ನವದೆಹಲಿ: ಕೋವಿಡ್ -19 ಸೋಂಕಿನಿಂದ  ಕಳೆದ 24 ಗಂಟೆಗಳ ಅವಧಿಯಲ್ಲಿ ಆರು ರಾಜ್ಯಗಳಲ್ಲಿ ಆರು ಸಾವಿನ ಪ್ರಕರಣಗಳು ವರದಿಯಾಗಿದ್ದು, 106 ಮಂದಿಗೆ ಹೊಸದಾಗಿ ಸೋಂಕು ತಗುಲಿರುವುದು ದೃಢಪಟ್ಟಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ

ಈವರೆಗೂ 25 ಸಾವಿನ ಪ್ರಕರಣಗಳು ಸೇರಿದಂತೆ ದೇಶದಲ್ಲಿ 1070 ಹೊಸ ಪ್ರಕರಣಗಳು ದೃಢಪಟ್ಟಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗರ್ ವಾಲ್ ತಿಳಿಸಿದ್ದಾರೆ.

ಕೋವಿಡ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಭಾನುವಾರದವರೆಗೂ 34 ಸಾವಿರದ 931 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ರಾಮನ್ ರಾಮನ್ ಗಂಗಖೇಡ್ಕರ್ ಹೇಳಿದ್ದಾರೆ.

ಪ್ರಯೋಗಾಲಯಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. 113 ಪ್ರಯೋಗಾಲಯಗಳು ಕಾರ್ಯನಿರ್ವಹಿಸುತ್ತಿವೆ. ಕೋವಿಡ್-19 ಪರೀಕ್ಷೆ ನಡೆಸಲು 47 ಖಾಸಗಿ ಪ್ರಯೋಗಾಲಯಗಳಿಗೂ ಅನುಮತಿ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಲಾಕ್ ಡಾನ್ ವೇಳೆಯಲ್ಲಿ ಪ್ರಯೋಗಾಲಯಗಳಲ್ಲಿ ಕೆಲಸ ಮಾಡುವವರಿಗೆ ಉದ್ಯೋಗದಾತರು ಯಾವುದೇ ರೀತಿಯ  ಕಡಿತ ಮಾಡದೆ ಪೂರ್ಣ ಪ್ರಮಾಣದ ಸಂಬಳ ನೀಡಬೇಕು, ಈ ಅವಧಿಯಲ್ಲಿ ಮನೆ ಮಾಲೀಕರು ಬಾಡಿಗೆ ಪಡೆಯುವಂತಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ಜಂಟಿ ಕಾರ್ಯದರ್ಶಿ ಪುಣ್ಯ ಸಲೀಲಾ ಶ್ರೀವಾಸ್ತವ ಸೂಚನೆ ನೀಡಿದ್ದಾರೆ. 

21 ದಿನಗಳ ಲಾಕ್ ಡೌನ್ ಸಂದರ್ಭದಲ್ಲಿ ಉಂಟಾಗುವ ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಲಹೆ ನೀಡಲು 08046110007 ಸಹಾಯವಾಣಿಯನ್ನು ನಿಮ್ಹಾನ್ಸ್ ತೆರೆದಿದೆ ಎಂದು ಅಗರ್ ವಾಲ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT