ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19: ಕೇರಳ, ತಮಿಳುನಾಡಿನಲ್ಲಿ ಹೊಸ ಪ್ರಕರಣಗಳು, ಒಟ್ಟಾರೇ ದೇಶದಲ್ಲಿ 1065 ಮಂದಿಗೆ ಸೋಂಕು

ಕೇರಳ ಹಾಗೂ ತಮಿಳುನಾಡಿನಲ್ಲಿ ಕೋವಿಡ್ -19 ಹೊಸ ಪ್ರಕರಣಗಳು ವರದಿಯಾಗಿದ್ದು, ದೇಶದಲ್ಲಿ ಈವರೆಗೂ ಸೋಂಕಿತರ ಸಂಖ್ಯೆ 1065 ಆಗಿದೆ

ನವದೆಹಲಿ: ಕೇರಳ ಹಾಗೂ ತಮಿಳುನಾಡಿನಲ್ಲಿ ಕೋವಿಡ್ -19 ಹೊಸ ಪ್ರಕರಣಗಳು ವರದಿಯಾಗಿದ್ದು, ದೇಶದಲ್ಲಿ ಈವರೆಗೂ ಸೋಂಕಿತರ ಸಂಖ್ಯೆ 1065 ಆಗಿದೆ

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯಂತೆ ಭಾನುವಾರ ಗುಜರಾತ್ ಹಾಗೂ ಮಹಾರಾಷ್ಟ್ರದಲ್ಲಿ ಹೊಸ ಪ್ರಕರಣಗಳು ವರದಿಯಾಗಿದ್ದು, ಈ ಸೋಂಕಿನಿಂದ ಮೃತಪಟ್ಟರ ಸಂಖ್ಯೆ 23ಕ್ಕೆ ಏರಿಕೆ ಆಗಿದೆ. 

ಈವರೆಗೂ ಮಹಾರಾಷ್ಟ್ರ, ಕೇರಳ, ತೆಲಂಗಾಣ, ಗುಜರಾತ್, ಕರ್ನಾಟಕ, ಮಧ್ಯಪ್ರದೇಶ, ತಮಿಳುನಾಡು, ಬಿಹಾರ, ಪಂಜಾಬ್ , ದೆಹಲಿ , ಪಶ್ಚಿಮ ಬಂಗಾಳ , ಜಮ್ಮು -ಕಾಶ್ಮೀರ ಮತ್ತು ಹಿಮಾಚಲ ಪ್ರದೇಶಗಳಿಂದ ಸಾವಿನ ಪ್ರಕರಣಗಳು ವರದಿಯಾಗಿವೆ.

ಈ ಮಧ್ಯೆ ಭಾರತ ಕೊರೋನಾ ವೈರಸ್ ತಡೆಗಟ್ಟುವುದಕ್ಕೆ 3 ವಾರಗಳ ಕಾಲ ಲಾಕ್ ಡೌನ್ ಘೋಷಿಸಿರುವುದು ವೈರಸ್ ಹರಡುವುದಿಕೆ ತಡೆಗೆ ಸಾಕಾಗುವುದಿಲ್ಲ ಎಂದು ಯೂನಿವರ್ಸಿಟಿ ಆಫ್ ಕೇಂಬ್ರಿಡ್ಜ್ ಸಂಶೋಧಕರು ಅಭಿಪ್ರಾಯಪಟ್ಟಿದ್ದಾರೆ. 

ನಿಯಮಿತ ಅಂತರದಲ್ಲಿ ಮೂರು ಬಾರಿ ಲಾಕ್ ಡೌನ್ ಗೆ ಕೇಂಬ್ರಿಡ್ಜ್ ಸಂಶೋಧಕರು ಸಲಹೆ ನೀಡಿದ್ದು, 5 ದಿನಗಳ ಅಂತರ ನೀಡುವುದಕ್ಕೆ ಹೇಳಿದೆ. 21 ದಿನಗಳು, 28 ದಿನಗಳು, 18 ದಿನಗಳು ಈ ಮಧ್ಯದಲ್ಲಿ 5 ದಿನಗಳ ಸಡಿಲಿಕೆ ನೀಡುವುದು ಕೊರೋನಾ ವೈರಸ್ ಹರಡುವಿಕೆ ತಡೆ ಹೋರಾಟಕ್ಕೆ ಇರುವ ಪರಿಣಾಮಕಾರಿ ಲಾಕ್ ಡೌನ್ ವಿಧಾನ ಎಂದು ಅಭಿಪ್ರಾಯಪಟ್ಟಿದ್ದಾರೆ.

ಯುರೋಪ್ ಖಂಡದಲ್ಲಿ ಈವರೆಗೂ 20 ಸಾವಿರ ಜನರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದು, 3 ಲಕ್ಷಕ್ಕೂ ಅಧಿಕ ಜನರು ಸೋಂಕಿಗೆ ಒಳಗಾಗಿದ್ದಾರೆ. ಇಟಲಿಯಲ್ಲಿ 10 ಸಾವಿರ, ಸ್ಪೇನ್ ನಲ್ಲಿ 5600 ಮಂದಿ ಕೋವಿಡ್ -19 ಸೋಂಕಿನಿಂದ ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT