ಕನಿಕಾ ಕಪೂರ್ 
ದೇಶ

ಕೊರೋನಾ: 4ನೇ ಬಾರಿ ಪರೀಕ್ಷೆಯಲ್ಲೂ ಕನಿಕಾ ಕಪೂರ್ ನಲ್ಲಿ ವೈರಸ್ ಪತ್ತೆ

ಕೊರೋನಾ ವೈರಸ್ ನಿಂದ ಬಳಲುತ್ತಿರುವ ಬಾಲಿವುಡ್ ನಟಿ ಕನಿಕಾ ಕಪೂರ್ ಅವರನ್ನು ನಾಲ್ಕನೇ ಬಾರಿ ಪರೀಕ್ಷೆಗೊಳಪಡಿಸಲಾಗಿದ್ದು, ಇದರಲ್ಲೂ ವೈರಸ್ ಇರುವುದು ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಲಖನೌ: ಕೊರೋನಾ ವೈರಸ್ ನಿಂದ ಬಳಲುತ್ತಿರುವ ಬಾಲಿವುಡ್ ನಟಿ ಕನಿಕಾ ಕಪೂರ್ ಅವರನ್ನು ನಾಲ್ಕನೇ ಬಾರಿ ಪರೀಕ್ಷೆಗೊಳಪಡಿಸಲಾಗಿದ್ದು, ಇದರಲ್ಲೂ ವೈರಸ್ ಇರುವುದು ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಮಾರ್ಚ್ 20 ರಂದು ಕನಿಕಾ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕನಿಕಾ ಅವರಲ್ಲಿ ವೈರಸ್ ದೃಢಪಟ್ಟಿತ್ತು. ಸತತ ಚಿಕಿತ್ಸೆ ಬಳಿಕವೂ ಕನಿಕಾ ಅವರಲ್ಲಿ ವೈರಸ್ ಇನ್ನೂ ದೃಢವಾಗಿರುವುದು ಇದೀಗ ಅವರ ಕುಟುಂಬಸ್ಥರಲ್ಲಿ ಆತಂಕ ಹಚ್ಚಾಗುವಂತೆ ಮಾಡಿದೆ. 

ಲಂಡನ್ ಗೆ ತೆರಳಿದ್ದ ಕನಿಕಾ ಅವರು ಮಾರ್ಚ್ 9 ರಂದು ಭಾರತಕ್ಕೆ ಹಿಂತಿರುಗಿದ್ದರು. ಇದಾದ ಕೆಲವೇ ದಿನಗಳಲ್ಲಿ ಜ್ವರ ಹಾಗೂ ಅತಿಯಾದ ಕೆಮ್ಮು ಕಾಣಿಸಿಕೊಂಡಿತ್ತು. ಬಳಿಕ ಅವರನ್ನು ಸಂಜಯ್ ಗಾಂಧಿ ಪೋಸ್ಟ್ ಗ್ರಾಡ್ಜುಯೇಟ್ ಇಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಗೆ ದಾಖಲಾದ ಬಳಿಕ ಕನಿಕಾ ಅವರ ವರ್ತನೆ ಕುರಿತು ಸಾಕಷ್ಟು ಟೀಕೆಗಳು ವ್ಯಕ್ತವಾಗತೊಡಗಿದ್ದವು. 

ಕನಿಕಾ ವೈದ್ಯಕೀಯ ವರದಿಗಳನ್ನು ನೋಡಿದರೆ ಭಯವಾಗುತ್ತಿದೆ. ಕನಿಕಾ ಚಿಕಿತ್ಸೆಗೆ ಸ್ಪಂದನೆ ನೀಡುತ್ತಿದ್ದ. ದೇಶದಾದ್ಯಂತ ಲಾಕ್ ಡೌನ್ ಮಾಡಲಾಗಿದ್ದು, ಆಕೆಯನ್ನು ಏರ್ ಲಿಫ್ಟ್ ಮೂಲಕ ಸ್ಥಳಾಂತರ ಮಾಡಲು ಕೂಡ ಸಾಧ್ಯವಾಗುತ್ತಿಲ್ಲ. ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದಷ್ಟೇ ನಾವು ಪ್ರಾರ್ಥನೆ ಮಾಡಬಹುದು ಎಂದು ಕನಿಕಾ ಅವರ ಕುಟುಂಬ ಸದಸ್ಯರೊಬ್ಬರು ಮಾಹಿತಿ ನೀಡಿದ್ದಾರೆ. 

ಆದರೆ, ಎಸ್'ಜಿಪಿಜಿಐಎಂಎಸ್ ವೈದ್ಯರು, ಕನಿಕಾ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT