ಬಂಗಾಳದಲ್ಲಿ 1 ಲಕ್ಷ ಜನರು ಕ್ವಾರೆಂಟೈನ್ ಗೆ!
ಕೊರೋನಾ ವೈರಸ್ ದೇಶಾದ್ಯಂತ ವೇಗವಾಗಿ ಹರಡುತ್ತಿದ್ದು, ಪಶ್ಚಿಮ ಬಂಗಾಳದಲ್ಲಿ 24 ಗಂಟೆಗಳಲ್ಲಿ 3 ಸಾವು ಸಂಭವಿಸಿದ್ದು, ಬರೊಬ್ಬರಿ 1 ಲಕ್ಷ ಜನರನ್ನು ಕ್ವಾರಂಟೈನ್ ನಲ್ಲಿರಿಸಲಾಗಿದೆ.
ಕೋಲ್ಕತ್ತ: ಕೊರೋನಾ ವೈರಸ್ ದೇಶಾದ್ಯಂತ ವೇಗವಾಗಿ ಹರಡುತ್ತಿದ್ದು, ಪಶ್ಚಿಮ ಬಂಗಾಳದಲ್ಲಿ 24 ಗಂಟೆಗಳಲ್ಲಿ 3 ಸಾವು ಸಂಭವಿಸಿದ್ದು, ಬರೊಬ್ಬರಿ 1 ಲಕ್ಷ ಜನರನ್ನು ಕ್ವಾರಂಟೈನ್ ನಲ್ಲಿರಿಸಲಾಗಿದೆ.
ಭಾನುವಾರ ಉಸಿರಾಟದ ತೊಂದರೆಯಿಂದ ಮಹಿಳೆಯೊಬ್ಬರು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಮಾ.31 ರಂದು ಆಕೆ ಮೃತಪಟ್ಟಿದ್ದು ಮೃತಪಟ್ಟಿರುವ ಮಹಿಳೆಯ ಗಂಟಲು ದ್ರವವನ್ನು ಪರೀಕ್ಷೆ ಮಾಡಲಾಗಿದ್ದು, ಕೊರೋನಾ ಸೋಂಕು ದೃಢಪಟ್ಟಿದೆ. ಈ ಬೆನ್ನಲ್ಲೇ ಆಕೆಯನ್ನು ಐಸೊಲೇಷನ್ ವಾರ್ಡ್ ನಲ್ಲಿಡಲು ಆಗ್ರಹಿಸಿದ್ದ ಬೇಡಿಕೆಯನ್ನು ಅಧಿಕಾರಿಗಳು ನಿರಾಕರಿಸಿದ ಕಾರಣ ಸರ್ಕಾರಿ ದಾದಿಯರು ಪ್ರತಿಭಟನೆ ನಡೆಸುತ್ತಿದ್ದಾರೆ.
ವೈರಾಣು ಹರಡುವಿಕೆ ಕಡಿಮೆ ಮಾಡಲು ಅಧಿಕಾರಿಗಳು ಬರೊಬ್ಬರಿ 1 ಲಕ್ಷ ಜನರನ್ನು ಕ್ವಾರಂಟೈನ್ ನಲ್ಲಿರಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.