ಮೊಹಲ್ಲಾ ಕ್ಲಿನಿಕ್ 
ದೇಶ

ದೆಹಲಿ: ಮೊಹಲ್ಲಾ ಕ್ಲಿನಿಕ್‌ನ ಮತ್ತೋರ್ವ ವೈದ್ಯರಲ್ಲಿ ಕೊರೋನಾ ವೈರಸ್ ಸೋಂಕು ದೃಢ

ಈಶಾನ್ಯ ದೆಹಲಿಯ ಮೊಹಲ್ಲಾ ಕ್ಲಿನಿಕ್‌ನ ಮತ್ತೋರ್ವ ವೈದ್ಯರಿಗೆ ಕೋವಿಡ್‌-19 ಸೋಂಕು ಇರುವುದು ದೃಢಪಟ್ಟಿದೆ.

ನವದೆಹಲಿ: ಈಶಾನ್ಯ ದೆಹಲಿಯ ಮೊಹಲ್ಲಾ ಕ್ಲಿನಿಕ್‌ನ ಮತ್ತೋರ್ವ ವೈದ್ಯರಿಗೆ ಕೋವಿಡ್‌-19 ಸೋಂಕು ಇರುವುದು ದೃಢಪಟ್ಟಿದೆ.

ಈಶಾನ್ಯ ದೆಹಲಿಯ ಬಾಬರ್‌ಪುರದಲ್ಲಿರುವ ಮೊಹಲ್ಲಾ ಕ್ಲಿನಿಕ್‌ನ ವೈದ್ಯರಿಗೆ ಸೋಂಕು ದೃಢಪಟ್ಟಿದೆ ಎಂದು ಮಂಗಳವಾರ ಮೂಲಗಳು ತಿಳಿಸಿವೆ.

ವೈದ್ಯರಲ್ಲಿ ಕೊರೊನಾವೈರಸ್‌ ಪಾಸಿಟಿವ್ ವರದಿ ಬಂದ ನಂತರ, ಮೊಹಲ್ಲಾ ಚಿಕಿತ್ಸಾಲಯದ ಹೊರಗೆ ನೋಟಿಸ್ ಹಾಕಲಾಗಿದ್ದು, ಮಾರ್ಚ್ 12-20ರ ನಡುವೆ ಚಿಕಿತ್ಸಾಲಯಕ್ಕೆ ಭೇಟಿ ನೀಡಿದ ರೋಗಿಗಳು ಮುಂದಿನ 15 ದಿನಗಳವರೆಗೆ ತಮ್ಮ ಮನೆಯಲ್ಲಿ ಕಟ್ಟುನಿಟ್ಟಾಗಿ ಸ್ವಯಂ-ಸಂಪರ್ಕ ತಡೆಯಲ್ಲಿ ಇರಬೇಕು ಎಂದು ವಿನಂತಿಸಲಾಗಿದೆ.

ಕಳೆದ ವಾರ, ಈಶಾನ್ಯ ದೆಹಲಿಯ ಮೌಜ್‌ಪುರದ ಮೊಹಲ್ಲಾ ಆಸ್ಪತ್ರೆಯ ವೈದ್ಯರು, ಅವರ ಪತ್ನಿ ಮತ್ತು ಹದಿಹರೆಯದ ಮಗಳಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿತ್ತು. ಅವರೊಂದಿಗೆ ಸಂಪರ್ಕಕ್ಕೆ ಬಂದ 900 ಕ್ಕೂ ಹೆಚ್ಚು ಜನರನ್ನು 14 ದಿನಗಳ ಸಂಪರ್ಕತಡೆಯಲ್ಲಿ ಇರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ