ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ದೇಶದಲ್ಲಿ ಕೊರೋನಾಘಾತ: 24 ಗಂಟೆಗಳಲ್ಲಿ 77 ಸಾವು, 35,365ಕ್ಕೇರಿದ ಸೋಂಕಿತರ ಸಂಖ್ಯೆ

ದೇಶದಲ್ಲಿ ಕೊರೋನಾವೈರಸ್ ರಣಕೇಕೆ ಹಾಕುತ್ತಿದ್ದು, ಕೇವಲ 24 ಗಂಟೆಗಳಲ್ಲಿ 77 ಮಂದಿಯನ್ನು ಬಲಿಪಡೆದುಕೊಂಡಿದೆ. ಅಲ್ಲದೆ, ಒಂದೇ ದಿನದಲ್ಲಿ 1,755 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 35,365ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಸಂಗ್ರಹ ಚಿತ್ರ
Srinivasa Murthy VN
Updated On : 1 May 2020, 7:53 pm

ನವದೆಹಲಿ: ದೇಶದಲ್ಲಿ ಕೊರೋನಾವೈರಸ್ ರಣಕೇಕೆ ಹಾಕುತ್ತಿದ್ದು, ಕೇವಲ 24 ಗಂಟೆಗಳಲ್ಲಿ 77 ಮಂದಿಯನ್ನು ಬಲಿಪಡೆದುಕೊಂಡಿದೆ. ಅಲ್ಲದೆ, ಒಂದೇ ದಿನದಲ್ಲಿ 1,755 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 35,365ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ನಡುವಲ್ಲೇ ಗುಣಮುಖರಾಗುತ್ತಿರುವವರ ಸಂಖ್ಯೆ ಕೂಡ ಏರಿಕೆ ಕಂಡಿದ್ದು, 35,365 ಮಂದಿಯ ಪೈಕಿ 9,064 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಪ್ರಸ್ತುತ ದೇಶದಲ್ಲಿ 25,148 ಮಂದಿ ಸೋಂಕಿನಿಂದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಒಟ್ಟಾರೆಯಾಗಿ ದೇಶದಲ್ಲಿ 1,152 ಮಂದಿ ಸಾವನ್ನಪ್ಪಿದ್ದಾರೆಂದು ಸಚಿವಾಲಯ ತಿಳಿಸಿದೆ. 

ದೇಶದ ವಿವಿಧ ರಾಜ್ಯಗಳಿಗೆ ಹೋಲಿಕೆ ಮಾಡಿದರೆ, ಮಹಾರಾಷ್ಟ್ರ ರಾಜ್ಯದಲ್ಲಿಯೇ ಅತೀ ಹೆಚ್ಚು ಸೋಂಕಿತರ ಪ್ರಕರಣಗಳು ದಾಖಲಾಗಿವೆ. ಮಹಾರಾಷ್ಟ್ರದಲ್ಲಿ ಈ ವರೆಗೂ 10,498 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಗುಜರಾತ್ ನಲ್ಲಿ 4,395, ದೆಹಲಿಯಲ್ಲಿ 3,515, ಮಧ್ಯಪ್ರದೇಶದಲ್ಲಿ 2,719, ರಾಜಸ್ತಾನ 2,584, ತಮಿಳುನಾಡು 2,323, ಉತ್ತರಪ್ರದೇಶ 2,281 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 

Advertisement

Advertisement

ಇನ್ನು ಆಂಧ್ರಪ್ರದೇಶದಲ್ಲಿ 1,463 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದರೆ, 33 ಮಂದಿ ಸಾವನ್ನಪ್ಪಿದ್ದಾರೆ. ಬಿಹಾರದಲ್ಲಿ 426 ಮಂದಿಯಲ್ಲಿ ಸೋಂಕು ಹಾಗೂ ಇಬ್ಬರು ಸಾವನ್ನಪ್ಪಿದ್ದಾರೆ, ಹರಿಯಾಣದಲ್ಲಿ 313 ಸೋಂಕು, ಮೂವರು ಸಾವನ್ನಪ್ಪಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ 614 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 8 ಮಂದಿ ಸಾವನ್ನಪ್ಪಿದ್ದಾರೆ, ಕರ್ನಾಟಕದಲ್ಲಿ 576 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದರೆ, 22 ಮಂದಿ ಸಾವನ್ನಪ್ಪಿದ್ದಾರೆ. ಕೇರಳದಲ್ಲಿ 497 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದರೆ, ನಾಲ್ವರು ಸಾವನ್ನಪ್ಪಿದ್ದಾರೆ. 

ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಾದ ತ್ರಿಪುರ, ಮಿಜೋರಾಂ, ಪಾಂಡಿಚೆರಿ, ಮಣಿಪುರ, ಗೋವಾ, ಅರುಣಾಚಲ ಪ್ರದೇಶದಲ್ಲಿ 10ಕ್ಕಿಂತಲೂ ಕಡಿಮೆ ಪ್ರಕರಣಗಳು ಬೆಳಕಿಗೆ ಬಂದಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement