ದೇಶ

ಕೊವಿಡ್-19: ಕೇರಳದಲ್ಲಿ ಮತ್ತೆ 2 ಪ್ರಕರಣ ಪತ್ತೆ, ಗ್ರೀನ್ ಜೋನ್ ಸ್ಥಾನ ಕಳೆದುಕೊಂಡ ವಯನಾಡು

Lingaraj Badiger

ತಿರುವನಂತಪುರಂ: ಕೇರಳದಲ್ಲಿ ಶನಿವಾರ ಮತ್ತೆ ಇಬ್ಬರಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ಈ ಪೈಕಿ ಒಂದು ಪ್ರಕರಣ ವಯನಾಡಿನಲ್ಲಿ ಪತ್ತೆಯಾಗಿದ್ದು, ಗ್ರೀನ್ ಜೋನ್ ಸ್ಥಾನ ಕಳೆದುಕೊಂಡಿದೆ.

ವಯನಾಡಿನಲ್ಲಿ ಕಳೆದ ಒಂದು ತಿಂಗಳಿಂದ ಯಾವುದೇ ಪಾಸಿಟಿವ್ ಪ್ರಕರಣಗಳು ವರದಿಯಾಗಿರಲಿಲ್ಲ. ಹೀಗಾಗಿ ಈ ಜಿಲ್ಲೆಯನ್ನು ಗ್ರೀನ್ ಜೋನ್ ಪಟ್ಟಿಗೆ ಸೇರಿಸಲಾಗಿತ್ತು. ಆದರೆ ಇಂದು ಒಂದು ಪ್ರಕರಣ ಪತ್ತೆಯಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಹೇಳಿದ್ದಾರೆ.

ಮತ್ತೊಂದು ಪ್ರಕರಣ ಕಣ್ಣೂರ್ ನಲ್ಲಿ ಪತ್ತೆಯಾಗಿದ್ದು, ಈ ಜಿಲ್ಲೆ ರಾಜ್ಯದಲ್ಲಿಯೇ ಅತೀ ಹೆಚ್ಚು ಕೊವಿಡ್-19 ಪ್ರಕರಣಗಳನ್ನು ಹೊಂದಿದೆ.

ರಾಜ್ಯದಲ್ಲಿ ಇಂದು ಹೊಸದಾಗಿ ಎರಡು ಪ್ರಕರಣಗಳು ಪಾಸಿಟಿವ್ ಬಂದಿದ್ದು, ಒಂದು ಪ್ರಕರಣ ವಯನಾಡಿನಲ್ಲಿ ಪತ್ತೆಯಾಗಿದೆ. ಹೀಗಾಗಿ ವಯನಾಡು ಜಿಲ್ಲೆಯನ್ನು ಗ್ರೀನ್ ಜೋನ್ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ವಿಜಯನ್ ತಿಳಿಸಿದ್ದಾರೆ.

ಕೇರಳದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 499ಕ್ಕೆ ಏರಿಕೆಯಾಗಿದೆ. 

SCROLL FOR NEXT