ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಮಹಾರಾಷ್ಟ್ರದಲ್ಲಿ ಒಂದೇ ದಿನ ದಾಖಲೆಯ 1008 ಮಂದಿಯಲ್ಲಿ ಕೊರೋನಾ ಪತ್ತೆ!

ಒಂದೆಡೆ ದೇಶದಲ್ಲಿ ಲಾಕ್'ಡೌನ್ ಸಡಿಲಿಸಲು ಸಿದ್ಧತೆಗಳು ಆರಂಭವಾಗಿರುವಾಗಲೇ ಕೊರೋನಾ ವೈರಸ್ ಪ್ರಕರಣಗಳು ಶುಕ್ರವಾರ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡಿವೆ. ಮಹಾರಾಷ್ಟ್ರ ಒಂದೇ ರಾಜ್ಯದಲ್ಲಿ ಒಂದೇ ದಿನ 1008 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

ಸಂಗ್ರಹ ಚಿತ್ರ
Manjula VN
Updated On : 2 May 2020, 8:31 am

ನವದೆಹಲಿ: ಒಂದೆಡೆ ದೇಶದಲ್ಲಿ ಲಾಕ್'ಡೌನ್ ಸಡಿಲಿಸಲು ಸಿದ್ಧತೆಗಳು ಆರಂಭವಾಗಿರುವಾಗಲೇ ಕೊರೋನಾ ವೈರಸ್ ಪ್ರಕರಣಗಳು ಶುಕ್ರವಾರ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡಿವೆ. ಮಹಾರಾಷ್ಟ್ರ ಒಂದೇ ರಾಜ್ಯದಲ್ಲಿ ಒಂದೇ ದಿನ 1008 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 

ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ಪ್ರತೀನಿತ್ಯ ಏರಿಕೆಯಾಗುತ್ತಲೇ ಇದ್ದು, ಇದೀಗ ಆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11,506ಕ್ಕೆ ಏರಿಕೆಯಾಗಿದೆ. ಇನ್ನು ಮಹಾರಾಷ್ಟ್ರದಲ್ಲಿ ಒಂದೇ ದಿನ 26 ಮಂದಿ ಸಾವಿಗೀಡಾಗಿದ್ದು, ಸಾವಿನ ಸಂಖ್ಯೆ 485ಕ್ಕೆ ಏರಿಕೆಯಾಗಿದೆ. 

ಈ ನಡುವೆ ನಿನ್ನೆ 106 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇದರಂತೆ ಒಟ್ಟು ಗುಣಮುಖರಾಗಿರುವವರ ಸಂಖ್ಯೆ 1,879ಕ್ಕೆ ಏರಿಕೆಯಾಗಿದೆ. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement