ಪ್ರಕಾಶ್ ಜಾವ್ಡೇಕರ್ 
ದೇಶ

ಕೊರೋನಾದ ಕೆಟ್ಟ ಹಂತ ದಾಟಿದ್ದೇವೆ, ಆದರೂ ಮುಂಜಾಗ್ರತಾ ಕ್ರಮ ಅವಶ್ಯಕ: ಜಾವ್ಡೇಕರ್

ಸಾಂಕ್ರಾಮಿಕ ಪಿಡುಗಾದ ಕೋವಿಡ್ 19 ನ ಕೆಟ್ಟ ಹಂತವನ್ನು ಭಾರತ ದಾಟಿದೆ, ಹೀಗಿದ್ದರೂ ಅವಶ್ಯಕ ಮುಂಜಾಗ್ರತಾ ಕ್ರಮಗಳನ್ನು ಮುಂದುವರಿಸಿಕೊಂಡು ಹೋಗಬೇಕೆಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.

ನವದೆಹಲಿ: ಸಾಂಕ್ರಾಮಿಕ ಪಿಡುಗಾದ ಕೋವಿಡ್ 19 ನ ಕೆಟ್ಟ ಹಂತವನ್ನು ಭಾರತ ದಾಟಿದೆ, ಹೀಗಿದ್ದರೂ ಅವಶ್ಯಕ ಮುಂಜಾಗ್ರತಾ ಕ್ರಮಗಳನ್ನು ಮುಂದುವರಿಸಿಕೊಂಡು ಹೋಗಬೇಕೆಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.

ಕೆಟ್ಟ ಹಂತ ದಾಟಿದ್ದೇವೆ, ಆದರೆ ಇನ್ನೂ ಸಂಪೂರ್ಣವಾಗಿ ಕೊರೋನಾ ಮುಕ್ತವಾಗಿಲ್ಲ, ಲಾಕ್ ಡೌನ್ ನಿಂದಾಗಿ ಬೇರೆ ದೇಶಗಳಿಗಿಂತ ಭಾರತದ ಪರಿಸ್ಥಿತಿ ಸ್ವಲ್ಪ ಉತ್ತಮವಾಗಿದೆ ಎಂದು ಹೇಳಿದ್ದಾರೆ.

ಸದ್ಯ ಮೂರನೇ ಹಂತದ ಲಾಕ್ ಡೌನ್ ನಲ್ಲಿದ್ದೇವೆ, ಲಾಕ್ ಡೌನ್ ನಿಂದಾಗಿ ಕೊರೋನಾ ಹರಡುವ ಪ್ರಮಾಣ ಕಡಿಮೆಯಾಗುತ್ತದೆ, ಹೀಗಾಗಿ ಮತ್ತೆ 2 ವಾರಗಳ ಲಾಕ್ ಡೌನ್ ವಿಸ್ತರಿಸಲಾಗಿದೆ ಎಂದು ಹೇಳಿದ್ದಾರೆ.

"ಈ ಸೋಂಕು ಚೀನಾದಿಂದ ಬಂದಿದೆ. ಆದರೆ ಇನ್ನೂ ಲಸಿಕೆ ಲಭ್ಯವಾಗಿಲ್ಲ. ಹಾಗಾಗಿ ಕೋವಿಡ್ 19ನೊಂದಿಗೆ ವಿಭಿನ್ನವಾಗಿ ಬದುಕಬೇಕಿದೆ. ಮುಖಕ್ಕೆ ಮಾಸ್ಕ್ ಧರಿಸುವುದು, ಪದೇ ಪದೆ ಕೈ ತೊಳೆಯುವುದು, ಸಾಮಾಜಿಕ ಅಂತರ ಪಾಲಿಸಬೇಕಿದೆ. ಕಳೆದ 40 ದಿನಗಳ ಲಾಕ್‌ಡೌನ್‌ನಲ್ಲಿ ಸಮಾಜವು ಈ ಬಗ್ಗೆ ಚೆನ್ನಾಗಿ ಕಲಿತುಕೊಂಡಿದೆ" ಎಂದವರು ಹೇಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT