ದೆಹಲಿ ವಿಮಾನ ನಿಲ್ದಾಣ 
ದೇಶ

ಲಾಕ್ ಡೌನ್ ನಂತರ ಟರ್ಮಿನಲ್ 3ರ ಮೂಲಕ ದೆಹಲಿ ವಿಮಾನ ನಿಲ್ದಾಣ ಕಾರ್ಯಾರಂಭ

ಕೊವಿಡ್-19 ಲಾಕ್ ಡೌನ್ ಅಂತ್ಯವಾದ ನಂತರ ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಮೂರರ ಮೂಲಕ ವಾಣಿಜ್ಯ ವಿಮಾನಗಳ ಹಾರಾಟ ಆರಂಭವಾಗಲಿದೆ ಎಂದು ಭಾನುವಾರ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನವದೆಹಲಿ: ಕೊವಿಡ್-19 ಲಾಕ್ ಡೌನ್ ಅಂತ್ಯವಾದ ನಂತರ ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಮೂರರ ಮೂಲಕ ವಾಣಿಜ್ಯ ವಿಮಾನಗಳ ಹಾರಾಟ ಆರಂಭವಾಗಲಿದೆ ಎಂದು ಭಾನುವಾರ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಯಾಣಕರನ್ನು ಮತ್ತು ಅವರ ಬ್ಯಾಗ್ ಗಳನ್ನು ಡಿಸ್ ಇನ್ಫೆಕ್ಷನ್ ಮಾಡಲು ಟನಲ್ ಗಳನ್ನು ನಿರ್ಮಿಸಲಾಗುವುದು. ವಿಮಾನಯಾನ ಸಂಸ್ಥೆಗಳಿಗೆ ಪ್ರತ್ಯೇಕ ಪ್ರವೇಶ ದ್ವಾರಗಳನ್ನು ನಿಗದಿಪಡಿಸಲಾಗಿದೆ. ಜನದಟ್ಟಣೆಯಾಗದಂತೆ ನೋಡಿಕೊಳ್ಳಲು ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ವಿಸ್ತಾರ ಮತ್ತು ಇಂಡಿಗೋ ಪ್ರಯಾಣಿಕರು ಗೇಟ್ ನಂಬರ್ 1 ಮತ್ತು 2ರ ಮೂಲಕ ಮಾತ್ರ ಪ್ರವೇಶಿಸಬೇಕು. ಏರ್ ಏಷ್ಯಾ ಇಂಡಿಯಾ ಮತ್ತು ಏರ್ ಇಂಡಿಯಾ ಪ್ರಯಾಣಿಕರಿಗೆ ಗೇಟ್ 3 ಮತ್ತು ಗೇಟ್ 4 ನಿಗದಿಪಡಿಸಲಾಗಿದೆ. ಸ್ಪೈಸ್ ಜೆಟ್ ಮತ್ತು ಗೋ ಏರ್ ಪ್ರಯಾಣಿಕರು ಗೇಟ್ 5 ರ ಮೂಲಕ ಪ್ರವೇಶಿಸಬೇಕು ಎಂದು ಅವರು ತಿಳಿಸಿದ್ದಾರೆ.

ಎಲ್ಲಾ ಅಂತರಾಷ್ಟ್ರೀಯ ವಿಮಾನಯಾನ ಪ್ರಯಾಣಿಕರು ಗೇಟ್ ನಂಬರ್ 6, 7 ಮತ್ತು 8 ರ ಮೂಲಕ ಪ್ರವೇಶಿಸಬೇಕು ಎಂದು ಅವರು ಹೇಳಿದ್ದಾರೆ.

ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ಮಾರ್ಚ್ 25ರಿಂದ ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಲಾಗಿದ್ದು, ಅಂದಿನಿಂದ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದೆ. ಈಗ ಮೇ 17ರ ನಂತರ ಲಾಕ್ ಡೌನ್ ತೆರವುಗೊಳಿಸುವ ನಿರೀಕ್ಷೆಯಲ್ಲಿರುವ ವಿಮಾನ ನಿಲ್ದಾಣಗಳು, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮತ್ತು ಪ್ರಯಾಣಿಕರನ್ನು ಡಿಸ್ ಇನ್ಫೆಕ್ಷನ್ ಮಾಡಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ