ಸಾಂದರ್ಭಿಕ ಚಿತ್ರ 
ದೇಶ

ಎಲ್ಲಾ ನಿರ್ಗತಿಕ ವಲಸೆ ಕಾರ್ಮಿಕರ ರೈಲ್ವೆ ಪ್ರಯಾಣ ವೆಚ್ಚವನ್ನು ಕಾಂಗ್ರೆಸ್ ಭರಿಸಲಿದೆ: ಸೋನಿಯಾ ಗಾಂಧಿ

ದೇಶದ ವಿವಿಧ ರಾಜ್ಯಗಳಿಂದ ತಮ್ಮ ತಮ್ಮ ಊರುಗಳಿಗೆ ಹೋಗಲು ಕಷ್ಟಪಡುತ್ತಿರುವ ವಲಸೆ ಕಾರ್ಮಿಕರ ರೈಲ್ವೆ ಪ್ರಯಾಣದ ವೆಚ್ಚವನ್ನು ಕಾಂಗ್ರೆಸ್ ಭರಿಸುವುದಾಗಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಕಟಿಸಿದ್ದಾರೆ.

ನವದೆಹಲಿ: ದೇಶದ ವಿವಿಧ ರಾಜ್ಯಗಳಿಂದ ತಮ್ಮ ತಮ್ಮ ಊರುಗಳಿಗೆ ಹೋಗಲು ಕಷ್ಟಪಡುತ್ತಿರುವ ವಲಸೆ ಕಾರ್ಮಿಕರ ರೈಲ್ವೆ ಪ್ರಯಾಣದ ವೆಚ್ಚವನ್ನು ಕಾಂಗ್ರೆಸ್ ಭರಿಸುವುದಾಗಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಕಟಿಸಿದ್ದಾರೆ.

ಈ ಸಂಬಂಧ ಎಲ್ಲಾ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿಗೆ ಆದೇಶ ಹೊರಡಿಸಿರುವ ಅವರು ಅಗತ್ಯವಿರುವ ವಲಸೆ ಕಾರ್ಮಿಕರಿಗೆ ಅವರವರ ಊರುಗಳಿಗೆ ಹೋಗಲು ರೈಲ್ವೆ ಪ್ರಯಾಣದ ವೆಚ್ಚವನ್ನು ಭರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹೇಳಿದ್ದಾರೆ.

ದೇಶದ ಬಡವರಿಗೆ ಅಗತ್ಯವಿರುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಮಾಡುತ್ತಿರುವ ವಿನಮ್ರದ ಕೊಡುಗೆಯಿದು. ಈ ಸಮಯದಲ್ಲಿ ಕಾರ್ಮಿಕರ ನೆರವಿಗೆ ಬರುವುದು ಅತ್ಯಗತ್ಯವಾಗಿದೆ. ವಿದೇಶಗಳಲ್ಲಿ ಸಿಲುಕಿ ಹಾಕಿಕೊಂಡಿರುವ ಪ್ರಜೆಗಳನ್ನು ಭಾರತಕ್ಕೆ ಕರೆತರಲು ತೋರಿಸುವ ಆಸಕ್ತಿಯನ್ನು ಸರ್ಕಾರ ನಮ್ಮ ದೇಶದಲ್ಲಿರುವ ಬಡ, ನಿರ್ಗತಿಕ ವಲಸೆ ಕಾರ್ಮಿಕರ ಬಗ್ಗೆ ಏಕೆ ತೋರಿಸುತ್ತಿಲ್ಲ ಎಂದು ಸೋನಿಯಾ ಗಾಂಧಿ ಇದೇ ಸಂದರ್ಭದಲ್ಲಿ ಪ್ರಶ್ನಿಸಿದ್ದಾರೆ.

ವಲಸೆ ಕಾರ್ಮಿಕರನ್ನು ರೈಲಿನಲ್ಲಿ ಉಚಿತವಾಗಿ ಅವರ ಊರುಗಳಿಗೆ ಕಳುಹಿಸಿ ಎಂದು ಕಾಂಗ್ರೆಸ್ ಕೇಂದ್ರ ಸರ್ಕಾರ ಮತ್ತು ರೈಲ್ವೆ ಸಚಿವಾಲಯಗಳನ್ನು ಹಲವು ಬಾರಿ ಮನವಿ ಮಾಡಿಕೊಂಡರೂ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ