ಸಂಗ್ರಹ ಚಿತ್ರ 
ದೇಶ

ಕೊರೋನಾ ವೈರಸ್: ದೇಶದಲ್ಲಿ 24 ಗಂಟೆಗಳಲ್ಲಿ 2,573 ಹೊಸ ಪಾಸಿಟಿವ್ ಪ್ರಕರಣ, 83 ಸೋಂಕಿತರು ಸಾವು

ಭಾರತದಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮತ್ತೆ ಜೋರಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಬರೊಬ್ಬರಿ 2,573 ಹೊಸ ಪಾಸಿಟಿವ್ ಪ್ರಕರಣ ದಾಖಲಾಗಿವೆ. ಆ ಮೂಲಕ ಸೋಂಕಿತರ ಸಂಖ್ಯೆ 42,836ಕ್ಕೆ ಏರಿಕೆಯಾಗಿದೆ.

ನವದೆಹಲಿ: ಭಾರತದಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮತ್ತೆ ಜೋರಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಬರೊಬ್ಬರಿ 2,573 ಹೊಸ ಪಾಸಿಟಿವ್ ಪ್ರಕರಣ ದಾಖಲಾಗಿವೆ. ಆ ಮೂಲಕ ಸೋಂಕಿತರ ಸಂಖ್ಯೆ 42,836ಕ್ಕೆ ಏರಿಕೆಯಾಗಿದೆ.

ಕೇಂದ್ರ ಆರೋಗ್ಯ ಸಚಿವಾಲಯ ಈ ಬಗ್ಗೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ವಿವಿಧ ರಾಜ್ಯಗಳಿಂದ 2,573 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಆ ಮೂಲಕ ದೇಶದಲ್ಲಿ ಒಟ್ಟಾರೆ ಕೊರೋನಾ ಸೋಂಕಿತರ ಸಂಖ್ಯೆ 42, 836ಕ್ಕೆ ಏರಿಕೆಯಾಗಿದೆ. ಈ ಪೈಕಿ  11,762 ಮಂದಿ ಸೋಂಕಿತರು ಗುಣಮುಖರಾಗಿದ್ದು, 29, 685 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 

ಭಾರತದ 20 ಮಹಾ ನಗರಗಳಲ್ಲಿ ಕೊರೋನಾ ವೈರಸ್‌ ವ್ಯಾಪಕವಾಗಿ ಹರಡುತ್ತಿದೆ. ಅದರಲ್ಲೂ ಮುಂಬೈ, ಅಹಮದಾಬದ್, ದೆಹಲಿ, ಚೆನ್ನೈ ನಗರಗಳಲ್ಲೇ ಹೆಚ್ಚು ಕೊರೋನಾ ಪೀಡಿತರಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಒಂದೇ ದಿನದಲ್ಲಿ 83 ಸಾವು, ಸಾವಿನ ಸಂಖ್ಯೆ 1389ಕ್ಕೆ ಏರಿಕೆ
ಇನ್ನು ನಿನ್ನೆ ಒಂದೇ ದಿನ 83 ಮಂದಿ ಸೋಂಕಿತರು ಸಾವನ್ನಪ್ಪಿದ್ದು ಆ ಮೂಲಕ ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1389ಕ್ಕೆ ಏರಿಕೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!