ಕೊರೋನಾ ವೈರಸ್; ದೇಶದಲ್ಲಿ ಗುಣಮುಖರ ಪ್ರಮಾಣ ಶೇ.27.52ಕ್ಕೆ ಏರಿಕೆ: ಆರೋಗ್ಯ ಸಚಿವಾಲಯ
ಮಾರಕ ಕೊರೋನಾ ವೈರಸ್ ಮೇಲಿನ ಹಿಡಿತವನ್ನು ಭಾರತ ಮತ್ತಷ್ಟು ಬಿಗಿಗೊಳಿಸಿದ್ದು, ದೇಶದಲ್ಲಿ ವೈರಸ್ ಸೋಂಕಿತರ ಪೈಕಿ ಗುಣಮುಖರಾಗುತ್ತಿರುವವರ ಪ್ರಮಾಣ ಶೇ.27.52ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ.
ನವದೆಹಲಿ: ಮಾರಕ ಕೊರೋನಾ ವೈರಸ್ ಮೇಲಿನ ಹಿಡಿತವನ್ನು ಭಾರತ ಮತ್ತಷ್ಟು ಬಿಗಿಗೊಳಿಸಿದ್ದು, ದೇಶದಲ್ಲಿ ವೈರಸ್ ಸೋಂಕಿತರ ಪೈಕಿ ಗುಣಮುಖರಾಗುತ್ತಿರುವವರ ಪ್ರಮಾಣ ಶೇ.27.52ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ.
ಕಳೆದ 24 ಗಂಟೆಯಲ್ಲಿ 1,074 ಮಂದಿ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆ ಮೂಲಕ ಈವರೆಗೂ 11,706 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಇದರೊಂದಿಗೆ ಮಾರಕ ಸೋಂಕಿನಿಂದ ಗುಣವಾಗುವ ಪ್ರಮಾಣ ಶೇ.27.52ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಟ್ಟು 42,533 ಪ್ರಕರಣಗಳು ಈವರೆಗೆ ದಾಖಲಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಂಟಿ ಕಾರ್ಯದರ್ಶಿ ಲವ ಅಗರವಾಲ್ ಮಾಹಿತಿ ನೀಡಿದ್ದಾರೆ.
ಆದರೆ, ಕರ್ನಾಟಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇದಿನೆ ಏರಿಕೆಯಾಗುತ್ತಲೇ ಇದೆ. ಇಂದು ಕೂಡ ಹೊಸದಾಗಿ 37 ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು 651 ಪ್ರಕರಣಗಳು ದಾಖಲಾಗಿವೆ. ಇಂದು ದಾವಣಗೆರೆಯಲ್ಲಿ 22, ಬೀದರ್ 7, ಮಂಡ್ಯ 2 ಹಾಗೂ ಕಲಬುರಗಿಯಲ್ಲಿ 2 ಮತ್ತು ಚಿಕ್ಕಬಳ್ಳಾಪುರ, ಹಾವೇರಿ, ವಿಜಯಪು, ಬೆಂಗಳೂರಿನಲ್ಲಿ ತಲಾ ಒಂದೊಂದು ಪ್ರಕರಣಗಳು ವರದಿಯಾಗಿವೆ.
#IbdiaFightsCorona
— Ministry of Health
So far, as many as 11,706 people have been cured of #COVID19.
More details at:https://t.co/hmnwNrYmw2@PMOIndia @drharshvardhan @AshwiniKChoubey @PIB_India @COVIDNewsByMIB @CovidIndiaSeva @DDNewslive @airnewsalerts @PTI_News