ಕೊವಿಡ್-19:ತಮಿಳುನಾಡಿನಲ್ಲಿ ಒಂದೇ ದಿನ 527 ಹೊಸ ಪ್ರಕರಣ, ಸೋಂಕಿತರ ಸಂಖ್ಯೆ 3,550ಕ್ಕೆ ಏರಿಕೆ
ತಮಿಳುನಾಡಿನಲ್ಲಿ ಮಹಾಮಾರಿ ಕೊರೋನಾ ವೈರಸ್ ತೀವ್ರ ವ್ಯಾಪಕವಾಗಿ ಹರಡುತ್ತಿದ್ದು, ಸೋಮವಾರ ಒಂದೇ ದಿನ ಬರೋಬ್ಬರಿ 527 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,550ಕ್ಕೆ ಏರಿಕೆಯಾಗಿದೆ.
ಚೆನ್ನೈ: ತಮಿಳುನಾಡಿನಲ್ಲಿ ಮಹಾಮಾರಿ ಕೊರೋನಾ ವೈರಸ್ ತೀವ್ರ ವ್ಯಾಪಕವಾಗಿ ಹರಡುತ್ತಿದ್ದು, ಸೋಮವಾರ ಒಂದೇ ದಿನ ಬರೋಬ್ಬರಿ 527 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,550ಕ್ಕೆ ಏರಿಕೆಯಾಗಿದೆ.
ಕೊಯಂಬೆಡು ಮಾರುಕಟ್ಟೆಗೆ ಸಂಬಂಧಿಸಿದಂತೆ ಅತಿ ಹೆಚ್ಚು ಪ್ರಕರಣಗಳು ವರದಿಯಾಗಿವೆ ಎಂದು ತಮಿಳುನಾಡು ಆರೋಗ್ಯ ಇಲಾಖೆ ತಿಳಿಸಿದೆ.
ತಮಿಳುನಾಡು ಆರೋಗ್ಯ ಇಲಾಖೆ ಇಂದು ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಪ್ರಕಾರ, ಒಟ್ಟು 3550 ಸೋಂಕಿತರ ಪೈಕಿ 1,409 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕೊರೋನಾ ವೈರಸ್ ನಿಂದ ಇದುವರೆಗೆ 31 ಮಂದಿ ಮೃತಪಟ್ಟಿದ್ದಾರೆ.
ಈ ಮಧ್ಯೆ, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಬರೊಬ್ಬರಿ 2,573 ಹೊಸ ಪಾಸಿಟಿವ್ ಪ್ರಕರಣ ದಾಖಲಾಗಿವೆ. ಆ ಮೂಲಕ ಸೋಂಕಿತರ ಸಂಖ್ಯೆ 42,836ಕ್ಕೆ ಏರಿಕೆಯಾಗಿದೆ.ಈ ಪೈಕಿ 11,762 ಮಂದಿ ಸೋಂಕಿತರು ಗುಣಮುಖರಾಗಿದ್ದು, 29, 685 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.