ಕೋವಿಡ್-19 ಸೋಂಕಿತರ ಚಿತ್ರ 
ದೇಶ

ದೇಶದಲ್ಲಿ ಒಂದೇ ದಿನದಲ್ಲಿ 3900 ಕೊರೋನಾ ಸೋಂಕು ಪ್ರಕರಣ, 195 ಜನರ ಸಾವು-ಕೇಂದ್ರ ಸರ್ಕಾರ

ದೇಶದಲ್ಲಿ ಇಂದು ಒಂದೇ ದಿನದಲ್ಲಿ ಅತಿ ಹೆಚ್ಚು ಕೊರೋನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 46433ಕ್ಕೇರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ

ನವದೆಹಲಿ: ದೇಶದಲ್ಲಿ ಇಂದು ಒಂದೇ ದಿನದಲ್ಲಿ ಅತಿ ಹೆಚ್ಚು ಕೊರೋನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 46, 433ಕ್ಕೇರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ

ಕಳೆದ 24 ಗಂಟೆಗಳಲ್ಲಿ 3900 ಪ್ರಕರಣಗಳು ದೃಢಪಟ್ಟಿವೆ. ಇದು ಇಲ್ಲಿಯವರೆಗಿನ ಒಂದು ದಿನದ ಪ್ರಕರಣಗಳಾಗಿವೆ. 195 ಜನರು ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಇಲ್ಲಿಯವರೆಗೆ ಮೃತಪಟ್ಟವರ ಸಂಖ್ಯೆ 1568ಕ್ಕೇರಿಕೆಯಾಗಿವೆ

ಈ ನಡುವೆ, 12726 ಜನರು ಚೇತರಿಕೆ ಕಂಡಿದ್ದು,  ಚೇತರಿಕೆ ದರ ಶೇ, 27.41 ರಷ್ಟಿದೆ. ದೇಶದಲ್ಲಿ ಸದ್ಯ 32,138 ಸಕ್ರಿಯ ಪ್ರಕರಣಗಳಿವೆ ಎಂದು ಸಚಿವಾಲಯ ಮಾಹಿತಿ ನೀಡಿದೆ

ಮಹಾರಾಷ್ಟ್ರ ಅತಿ ಹೆಚ್ಚು ಪೀಡಿತ ಪ್ರದೇಶವಾಗಿದ್ದು 14541 ಸೋಂಕಿತರು 283 ಸಾವುಗಳನ್ನು ವರದಿ ಮಾಡಿದೆ. ಗುಜರಾತ್ 5804 ಪ್ರಕರಣಗಳು 319 ಸಾವುಗಳಿಂದ ಎರಡನೇ ಸ್ಥಾನದಲ್ಲಿದೆ. ದೆಹಲಿ 4898 ಪ್ರಕರಣಗಳು, 64 ಸಾವುಗಳಿಂದ ಮೂರನೇ ಸ್ಥಾನದಲ್ಲಿವೆ.

ಕೆಲ ರಾಜ್ಯಗಳನ್ನು ಮನವೊಲಿಸಿದ ನಂತರ  ಸೋಂಕಿತರ ಸಂಖ್ಯೆ ಹಾಗೂ ನಿರ್ವಹಣೆ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿವೆ. ದೇಶದಲ್ಲಿ ಕೋವಿಡ್ -19 ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲಾಗುತ್ತಿದೆ ಎಂದು ಆರೋಗ್ಯ ಸಚಿವಾಲಯದ ಪ್ರಧಾನ ಕಾರ್ಯದರ್ಶಿ ಲವ್ ಅಗರ್ ವಾಲ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು. 

ಸದ್ಯ ಮಟ್ಟಿಗೆ ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಸಮರ್ಥವಾಗಿ ನಿಭಾಯಿಸಲಾಗುತ್ತಿದೆ. ಆದರೆ, ಲಾಕ್ ಡೌನ್ ಸಡಿಲಿಕೆಯು ಕ್ಷೇತ್ರದ ಮಟ್ಟದಲ್ಲಿ ಪರಿಣಾಮ ಬೀರಬಹುದು ಎಂದರು. 

ಕೋವಿಡ್-19 ಸೋಂಕು ತಲುಪಿರುವ ಪ್ರತಿಯೊಬ್ಬರನ್ನು ಪತ್ತೆ ಹಚ್ಚಲಾಗುತ್ತಿದೆ. ಕಂಟೈನ್ ಮೆಂಟ್ ವಲಯಗಳಲ್ಲಿ ತೀವ್ರ ಉಸಿರಾಟದಂತಹ ಸಾರಿ ಹಾಗೂ ಸಾಮಾನ್ಯ ಜ್ವರ( ಐಎಲ್ಐ ) ಸಮಸ್ಯೆಯಿಂದ ಬಳಲುತ್ತಿರುವವರ ಬಗ್ಗೆ ನಿಗಾ ವಹಿಸಿ ಮಾಹಿತಿ ಸಂಗ್ರಹಿಸುವ ಮೂಲಕ ಮುಂದಿನ ಕ್ರಮದ ಸಲಹೆ ನೀಡಲಾಗುತ್ತಿದೆ ಎಂದು ಲವ್ ಅಗರ್ ವಾಲ್ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT