ದೇಶ

ಕೊವಿಡ್-19: ತೆಲಂಗಾಣದಲ್ಲಿ ಮೇ 29ರ ವರೆಗೆ ಲಾಕ್ ಡೌನ್ ವಿಸ್ತರಿಸಿದ ಕೆಸಿಆರ್

Lingaraj Badiger

ಹೈದರಾಬಾದ್: ಲಾಕ್ ಡೌನ್ ನಡುವೆಯೂ ಕೊರೋನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಹಾಮಾರಿಯನ್ನು ಕಟ್ಟಿಹಾಕುವುದಕ್ಕಾಗಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ರಾಜ್ಯದಲ್ಲಿ ಲಾಕ್ ಡೌನ್ ಅನ್ನು ಮೇ 29ರ ವರೆಗೆ ವಿಸ್ತರಿಸಿ ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಸದ್ಯ ಕೇಂದ್ರ ಸರ್ಕಾರ ದೇಶಾದ್ಯಂತ ಜಾರಿಗೊಳಿಸಿರುವ ಲಾಕ್ ಮೇ 17ಕ್ಕೆ ಅಂತ್ಯಗೊಳ್ಳಲಿದೆ. 

ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಚಂದ್ರಶೇಖರ್ ರಾವ್ ಅವರು, ಸಾರ್ವಜನಿಕರು ಸಂಜೆ 6 ಗಂಟೆಯೊಳಗೆ ಅಗತ್ಯ ವಸ್ತುಗಳನ್ನು ಖರೀದಿಸಬೇಕು. ಸಂಜೆ 6 ರಿಂದ ಬೆಳಗ್ಗೆ 7 ಗಂಟೆಯವರೆಗೆ ಕರ್ಫ್ಯೂ ಜಾರಿ ಇರುತ್ತದೆ ಎಂದರು.

ನಾವು ಸಂಪೂರ್ಣವಾಗಿ ವೈದ್ಯಕೀಯ ಉಪಕರಣಗಳನ್ನು ಹೊಂದಿದ್ದೇವೆ. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಿದ್ಧರಾಗಿದ್ದೇವೆ. ಆದರೆ ಜನ ನಮಗೆ ಸಹಕರಿಸಬೇಕು. 65 ವರ್ಷ ಮೇಲ್ಪಟ್ಟವರು ವೈದ್ಯಕೀಯ ತುರ್ತು ಅಗತ್ಯವಿದ್ದರೆ ಮಾತ್ರ ಮನೆಯಿಂದ ಹೊರಗೆ ಬರಬೇಕು. ಮಕ್ಕಳು ಸಹ ಮನೆಯಿಂದ ಹೊರಗೆ ಬರದಂತೆ ನೋಡಿಕೊಳ್ಳಬೇಕು ಎಂದರು.
 

SCROLL FOR NEXT