ಕೋವಿಡ್-19: ಮಹಾರಾಷ್ಟ್ರದಲ್ಲಿ ಒಂದೇ ದಿನ 771 ಮಂದಿಯಲ್ಲಿ ಸೋಂಕು ಪತ್ತೆ, ಮೇ 17ರವರೆಗೂ ಸೆಕ್ಷನ್ 144 ಜಾರಿ
ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ಬೆನ್ನು ಬಿಡದಂತೆ ಕಾಡುತ್ತಿದ್ದು, ಕೇವಲ ಒಂದೇ ದಿನ 771 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 14,541ಕ್ಕೆ ಏರಿಕೆಯಾಗಿದೆ.
ಮುಂಬೈ: ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ಬೆನ್ನು ಬಿಡದಂತೆ ಕಾಡುತ್ತಿದ್ದು, ಕೇವಲ ಒಂದೇ ದಿನ 771 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 14,541ಕ್ಕೆ ಏರಿಕೆಯಾಗಿದೆ.
ಮುಂಬೈನಲ್ಲಿ ಸೋಮವಾರ ಒಂದೇ ದಿನ ಹೆಮ್ಮಾರಿ ವೈರಸ್'ಗೆ 18 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ ಕೂಡ 583ಕ್ಕೆ ಏರಿಕೆಯಾಗಿದೆ.
ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಠಿಣ ಕ್ರಮ ಕೈಗೊಂಡಿರುವ ಸರ್ಕಾರ ಮೇ.17ರವರೆಗೂ ನಗರದಾದ್ಯಂತ ಸೆಕ್ಷನ್ 144 ಜಾರಿಗೊಳಿಸಿದೆ.