ರಾಹುಲ್ ಗಾಂಧಿ 
ದೇಶ

ಪುಲಿಟ್ಜರ್ ಪ್ರಶಸ್ತಿ ವಿಜೇತರಿಗೆ ರಾಹುಲ್ ಅಭಿನಂದನೆ: ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಲ್ಲವೇ- ಬಿಜೆಪಿ ಪ್ರಶ್ನೆ

ಪುಲಿಟ್ಜರ್ ಪ್ರಶಸ್ತಿ ಪಡೆದ ಭಾರತೀಯ ಪತ್ರಕರ್ತರಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅಭಿನಂದನೆ ಸಲ್ಲಿಸಿರವುದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತ ಪಡಿಸಿದೆ.

ನವದೆಹಲಿ: ಪುಲಿಟ್ಜರ್ ಪ್ರಶಸ್ತಿ ಪಡೆದ ಭಾರತೀಯ ಪತ್ರಕರ್ತರಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅಭಿನಂದನೆ ಸಲ್ಲಿಸಿರವುದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತ ಪಡಿಸಿದೆ.

ಕಾಶ್ಮೀರದ ಪತ್ರಕರ್ತರಾದ ಚನ್ನಿ ಆನಂದ್, ಮುಖ್ತಾರ್ ಖಾನ್ ಹಾಗೂ ದರ್ ಯಾಸಿನ್ ಅವರಿಗೆ ಫೀಚರ್ ಫೋಟೋಗ್ರಫಿ ವಿಭಾಗದಲ್ಲಿ ಪುಲಿಟ್ಜರ್ ಪ್ರಶಸ್ತಿ ಸಿಕ್ಕಿದ್ದು ಮಂಗಳವಾರ ಪತ್ರಕರ್ತರನ್ನು ಪ್ರಶಂಸಿಸಿದ್ದ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, ಜಮ್ಮು-ಕಾಶ್ಮೀರದ ಶಕ್ತಿಶಾಲಿ ಚಿತ್ರಣವನ್ನು ಬಿಚ್ಚಿಟ್ಟಿದ್ದೀರಿ ಎಂದು ಹೊಗಳಿದ್ದರು

ರಾಷ್ಟ್ರವಿರೋಧಿ ಅಡಿ ಬರಹದ ಜೊತೆಗೆ ಪ್ರಕಟಗೊಂಡ ಫೋಟೋಗಳನ್ನೇ  ಮುಂದಿಟ್ಟುಕೊಂಡು ಪುಲಿಟ್ಜರ್‌ ಪ್ರಶಸ್ತಿ ನೀಡಲು ಬಂದಾಗ ಸ್ವೀಕರಿಸಿದ್ದೇಕೆ ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಪ್ರಶ್ನಿಸಿದ್ದಾರೆ. ಭಾರತೀಯರೆಂದು ಹೇಳಿಕೊಳ್ಳುವ ಈ  ಪತ್ರಕರ್ತರಿಗೆ ದೇಶದ ಸಾರ್ವಭೌಮತೆ ಮುಖ್ಯವೋ, ಪ್ರಶಸ್ತಿ ಮುಖ್ಯವೋ ಎಂದು ಬಿಜೆಪಿ ಪ್ರಶ್ನಿಸಿದೆ. ಅಷ್ಟೇ ಅಲ್ಲ, ಪ್ರಶಸ್ತಿ ಪುರಸ್ಕೃತರನ್ನು ಹೊಗಳಿದ ರಾಹುಲ್‌ ಗಾಂಧಿ ನಡೆಯನ್ನೂ ಸಂಬಿತ್ ಪಾತ್ರ ಖಂಡಿಸಿದ್ದಾರೆ.

ಜಮ್ಮು ಕಾಶ್ಮೀರದ ಸ್ವಾತಂತ್ರ್ಯವನ್ನು ಭಾರತ ಕಿತ್ತುಕೊಂಡಿದೆ ಎಂದು ಉಲ್ಲೇಖಿಸಿದ್ದರೂ ಕೂಡಾ ರಾಹುಲ್ ಗಾಂಧಿ ಪ್ರಶಸ್ತಿ ಪುರಸ್ಕೃತರನ್ನು ಹೊಗಳುತ್ತಿರೋದೇಕೆ, ಕಾಶ್ಮೀರ ಭಾರತದ ಅವಿಭಾಜ್ಯ ಅಂಗವೋ ಅಲ್ಲವೋ ಎಂಬ ಬಗ್ಗೆ ವಿರೋಧ ಪಕ್ಷದ ನಾಯಕರು ಸ್ಪಷ್ಟನೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ ಕಾಶ್ಮೀರ ಹಾಗೂ ಪಾಕ್‌ ಆಕ್ರಮಿತ ಕಾಶ್ಮೀರದ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸಲಿ ಎಂದು ಬಿಜೆಪಿ ಒತ್ತಾಯಿಸಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

ಶ್ರೀಶೈಲ: ಹೋಟೆಲ್‌ನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ; ಕಾರಣ ನಿಗೂಢ

"ಕೇಸರಿ ಧರಿಸುವ ಯೋಗ ಗುರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ": ಬಾಬಾ ರಾಮ್‌ದೇವ್ ವಿರುದ್ಧ ಕಂಗನಾ ಮತ್ತೆ ಕಿಡಿ