ಕೊವಿಡ್-19: ತಮಿಳುನಾಡಿನಲ್ಲಿ ಒಂದೇ ದಿನ 771 ಹೊಸ ಪ್ರಕರಣ, ಸೋಂಕಿತರ ಸಂಖ್ಯೆ 4829ಕ್ಕೆ ಏರಿಕೆ
ತಮಿಳುನಾಡಿನಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಬುಧವಾರ ಒಂದೇ ದಿನ ಬರೋಬ್ಬರಿ 771 ಹೊಸ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 4829ಕ್ಕೆ ಏರಿಕೆಯಾಗಿದೆ.
ಚೆನ್ನೈ: ತಮಿಳುನಾಡಿನಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಬುಧವಾರ ಒಂದೇ ದಿನ ಬರೋಬ್ಬರಿ 771 ಹೊಸ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 4829ಕ್ಕೆ ಏರಿಕೆಯಾಗಿದೆ.
ತಮಿಳುನಾಡು ಆರೋಗ್ಯ ಇಲಾಖೆ ಇಂದು ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಪ್ರಕಾರ, ರಾಜ್ಯದಲ್ಲಿ ಒಟ್ಟು 771 ಮಂದಿಗೆ ಕೊವಿಡ್-19 ದೃಢಪಟ್ಟಿದ್ದು, ಈ ಪೈಕಿ ಚೆನ್ನೈ ನಗರದಲ್ಲಿಯೇ 324 ಮಂದಿಗ ಸೋಂಕು ತಗುಲಿದೆ. ಇದರೊಂದಿಗೆ ಚೆನ್ನೈನಲ್ಲಿ ಸೋಂಕಿತರ ಸಂಖ್ಯೆ 2328ಕ್ಕೆ ಏರಿಕೆಯಾಗಿದೆ.
ಈ ಮಧ್ಯೆ, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಬರೊಬ್ಬರಿ 2,680 ಹೊಸ ಪಾಸಿಟಿವ್ ಪ್ರಕರಣ ದಾಖಲಾಗಿವೆ. ಆ ಮೂಲಕ ಸೋಂಕಿತರ ಸಂಖ್ಯೆ 49,391ಕ್ಕೆ ಏರಿಕೆಯಾಗಿದೆ.ಈ ಪೈಕಿ 14,182 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.