ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಅನಾರೋಗ್ಯದಿಂದ ದೆಹಲಿ ಪೊಲೀಸ್ ಸಾವು, ಪರೀಕ್ಷೆಯಲ್ಲಿ ಕೊರೋನಾ ಪಾಸಿಟಿವ್!

ಹುಷಾರು ತಪ್ಪಿದ್ದರಿಂದ ದೆಹಲಿಯ ಆರ್ಎಂಎಲ್ ಆಸ್ಪತ್ರೆಗೆ ದಾಖಲಾಗಿದ್ದ ಪೊಲೀಸ್ ಒಬ್ಬರು ನಿನ್ನೆ ಮೃತಪಟ್ಟಿದ್ದು ಇಂದು ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದ್ದು ಆತಂಕ ಸೃಷ್ಟಿಸಿದೆ.

ದೆಹಲಿ ಪೊಲೀಸರು
Vishwanath S
Updated On : 6 May 2020, 8:15 pm

ನವದೆಹಲಿ: ಹುಷಾರು ತಪ್ಪಿದ್ದರಿಂದ ದೆಹಲಿಯ ಆರ್ಎಂಎಲ್ ಆಸ್ಪತ್ರೆಗೆ ದಾಖಲಾಗಿದ್ದ ಪೊಲೀಸ್ ಒಬ್ಬರು ನಿನ್ನೆ ಮೃತಪಟ್ಟಿದ್ದು ಇಂದು ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದ್ದು ಆತಂಕ ಸೃಷ್ಟಿಸಿದೆ. 

ವಾಯುವ್ಯ ದೆಹಲಿಯ ಭಾರತ್ ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ನಿನ್ನೆ ರಾತ್ರಿ ಹುಷಾರು ತಪ್ಪಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. 

ಕೋವಿಡ್ -19 ವೈರಸ್ ಆತಂಕ ಇದ್ದಿದ್ದರಿಂದ ವೈದ್ಯರು ಪೊಲೀಸ್ ಅಧಿಕಾರಿಯ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಿದ್ದರು. ಪರೀಕ್ಷೆಯಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ. 

Advertisement

Advertisement

ಮೃತ ಪೊಲೀಸ್ ಪತ್ನಿ ಮತ್ತು ಮೂರು ವರ್ಷದ ಮಗುವನ್ನು ಅಗಲಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement