ದೇಶ

ಕೋವಿಡ್ ಸಂಕಷ್ಟದ ನಡುವೆ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 59ಕ್ಕೆ ಹೆಚ್ಚಿಸಿ ತಮಿಳುನಾಡು ಸರ್ಕಾರ ಆದೇಶ

Raghavendra Adiga

ಚೆನ್ನೈ: ಕೊರೋನಾವೈರಸ್ ಹರಡುವಿಕೆ ತಡೆಗಾಗಿ ವ ಪ್ರಯತ್ನಗಳ ಮಧ್ಯೆ ತಮಿಳುನಾಡು ಸರ್ಕಾರಿ ನೌಕರರ ನಿವೃತ್ತಿಯ ವಯಸ್ಸನ್ನು 58 ರಿಂದ 59ಕ್ಕೆ ಹೆಚ್ಚಿಸಲು ಮುಖ್ಯಮಂತ್ರಿ ಕೆ ಪಳನಿಸ್ವಾಮಿ  ನಿರ್ಧರಿಸಿದ್ದಾರೆ. 

ನಿವೃತ್ತಿ ವಯಸ್ಸಿನ ಹೆಚ್ಚಳದ ಆದೇಶವು ಸರ್ಕಾರಿ ನೌಕರರು, ಶಿಕ್ಷಕರು, ಉಪನ್ಯಾಸಕರು ಮತ್ತು ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಮತ್ತು ಕಾಲೇಜುಗಳಲ್ಲಿನ ಪ್ರಾಧ್ಯಾಪಕರಿಗೆ ರಾಜ್ಯ ಸಾರ್ವಜನಿಕ ವಲಯದ ಘಟಕಗಳಿಗೆ ಅನ್ವಯಿಸುತ್ತದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಸರ್ಕಾರದ ಈ ಕ್ರಮವು ಸಾಂಕ್ರಾಮಿಕ ರೋಗ ನಿಯಂತ್ರಣ ಹಾಗೂ  ಮತ್ತು ಹೆಚ್ಚುತ್ತಿರುವ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ತ್ವರಿತ ಕ್ರಮಗಳಿಗೆ ಸಹಾಯ ಮಾಡುತ್ತದೆ ಎಂದು ನಿರೀಕ್ಷಿಸಲಾಗಿದೆ. ಬುಧವಾರದವರೆಗೆ, ತಮಿಳುನಾಡಿನಲ್ಲಿ 4,829  ಕೊರೋನಾವೈರಸ್ ಪ್ರಕರಣಗಳು ದಾಖಲಾಗಿದೆ.

ನಿವೃತ್ತಿಯ ವಯಸ್ಸನ್ನು ಹೆಚ್ಚಿಸುವ  ಮುಖ್ಯಮಂತ್ರಿ ಪಳನಿಸ್ವಾಮಿ ಅವರ ಆದೇಶವು ತಕ್ಷಣದಿಂದ ಜಾರಿಗೆ ಬರುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಈಗಾಗಲೇ, ಮಾರ್ಚ್ 31 ಮತ್ತು ಏಪ್ರಿಲ್ 30 ರಂದು ನಿವೃತ್ತರಾಗಬೇಕಿದ್ದ  ಸರ್ಕಾರಿ ವೈದ್ಯರು, ದಾದಿಯರು ಮತ್ತು ಇತರ ವೈದ್ಯಕೀಯ ಸಿಬ್ಬಂದಿಗಳ ಸೇವೆಗಳನ್ನು ಇನ್ನೂ ಎರಡು ತಿಂಗಳು ವಿಸ್ತರಿಸಲಾಗಿದೆ 

SCROLL FOR NEXT