ವಿಷಾನಿಲ ಸೋರಿಕೆಯಾದ ಎಲ್ ಜಿ ಪಾಲಿಮರ್ಸ್ ಘಟಕ 
ದೇಶ

ವಿಶಾಖಪಟ್ಟಣ ವಿಷಾನಿಲ ಸೋರಿಕೆ ಪ್ರಕರಣ: ಸಾವಿನ ಸಂಖ್ಯೆ 10ಕ್ಕೆ ಏರಿಕೆ, ಕೇಂದ್ರ ಸಚಿವ ಕಿಶನ್ ರೆಡ್ಡಿ ಸಂತಾಪ, ತನಿಖೆಗೆ ಆದೇಶ

ಆಂಧ್ರ ಪ್ರದೇಶದ ವಿಶಾಖಪಟ್ಟಣ ಜಿಲ್ಲೆಯ ಕಾರ್ಖಾನೆಯಲ್ಲಿ ಸಂಭವಿಸಿದ್ದ ವಿಷಾನಿಲ ಸೋರಿಕೆ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ವಿಶಾಖಪಟ್ಟಣ: ಆಂಧ್ರ ಪ್ರದೇಶದ ವಿಶಾಖಪಟ್ಟಣ ಜಿಲ್ಲೆಯ ಕಾರ್ಖಾನೆಯಲ್ಲಿ ಸಂಭವಿಸಿದ್ದ ವಿಷಾನಿಲ ಸೋರಿಕೆ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ಇಂದು ಮುಂಜಾನೆ ಸುಮಾರು 3 ಗಂಟೆ ಹೊತ್ತಿನಲ್ಲಿ ವಿಶಾಖಪಟ್ಟಣಂನ ಗೋಪಾಲಪಟ್ಟಣದ, ನಾಯ್ಡು ತೋಟಾ ಸಮೀಪದ ಆರ್ ಆರ್ ವೆಂಕಟಪುರಂನಲ್ಲಿರುವ ಎಲ್ ಜಿ ಪಾಲಿಮರ್ಸ್ ಇಂಡಸ್ಟ್ರೀಯಲ್ಲಿ ವಿಷಾನಿಲ ಸೋರಿಕೆಯಾಗಿದ್ದು, ಗಾಳಿಯಲ್ಲಿ ವಿಷಾನಿಲ ಸುತ್ತಮುತ್ತಲ ಪ್ರದೇಶಗಳಿಗೆ  ಹರಡಿದೆ. ಪರಿಣಾಮ ಬೆಳಗ್ಗೆ ವಾಕಿಂಗ್ ಗೆ ಮತ್ತು ಇತರೆ ಕಾರ್ಯಗಳಿಗೆ ಬಂದವರು ವಿಷಾನಿಲವನ್ನು ಉಸಿರಾಡಿ ಕೂಡಲೇ ಅಸ್ವಸ್ಥರಾಗಿದ್ದಾರೆ. ಈ ದುರ್ಘಟನೆಯಲ್ಲಿ ಈ ವರೆಗೂ ಸಾವನ್ನಪ್ಪಿದವರ ಸಂಖ್ಯೆ 8ಕ್ಕೆ ಏರಿಕೆಯಾಗಿದ್ದು, ಇಬ್ಬರು ವೃದ್ಧರು, 7 ವರ್ಷದ ಬಾಲಕಿ ಸೇರಿದಂತೆ ಒಟ್ಟು 10  ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ ಐದು ಮಂದಿ ಆಸ್ಪತ್ರೆಗೆ ಸೇರಿಸುವ ಮುನ್ನವೇ ಸಾವನ್ನಪ್ಪಿದ್ದರು ಎಂದು ತಿಳಿದುಬಂದಿದೆ.

Hundreds of people complained of breathlessness, irritation in eyes and stomach pain following the leakage of gas at LG Polymers near Visakhapatnam.
Express video | G Satyanarayana. @xpressandhra pic.twitter.com/6gOblB4fLo

ಅಸ್ವಸ್ಥರನ್ನು ವಿಶಾಖಪಟ್ಟದ ಕಿಂಗ್ ಜಾರ್ಜ್ ವೈದ್ಯಕೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಇದೊಂದು ಆಸ್ಪತ್ರೆಯಲ್ಲೇ ಸುಮಾರು 180ಕ್ಕೂ ಅಧಿಕ ಮಂದಿ ಅಸ್ವಸ್ಥರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ವಿಷಾನಿಲ ಸೋರಿಕೆಯಿಂದಾಗಿ ಕಾರ್ಖಾನೆಯ ಸುಮಾರು 5 ಕಿ.ಮೀ ವ್ಯಾಪ್ತಿಯಲ್ಲಿ ಆತಂಕ  ಸೃಷ್ಟಿಯಾಗಿದ್ದು, ಗೋಪಾಲಪಟ್ಟಣಂ ಸುತ್ತಲಿನ ಐದು ಗ್ರಾಮಗಳಲ್ಲಿನ ಜನರಿಗೆ ಉಸಿರಾಟದ ತೊಂದರೆ ಮತ್ತು ಗಂಟಲು ಕೆರೆತ ಸಮಸ್ಯೆ ಆರಂಭವಾಗಿದೆ. ನೂರಾರು ಮಂದಿ ಉಸಿರಾಟದ ಸಮಸ್ಯೆ, ಗಂಟಲು ನೋವು, ಕಣ್ಣಿನ ಉರಿ, ಹೊಟ್ಟೆ ನೋವು, ಇತರೆ ಸಮಸ್ಯೆಗಳಿಂದಾಗಿ ಆಸ್ಪತ್ರೆಗೆ  ದಾಖಲಾಗುತ್ತಿದ್ದಾರೆ. ಅಸ್ವಸ್ಥರನ್ನು ಆಸ್ಪತ್ರೆಗೆ ರವಾನಿಸಲು ಇದೀಗ ಆ್ಯಂಬುಲೆನ್ಸ್ ಗಳನ್ನು ಮತ್ತು ಸರ್ಕಾರಿ ಸಾರಿಗೆ ಬಸ್ ಗಳನ್ನು ಕೂಡ ನಿಯೋಜನೆ ಮಾಡಲಾಗಿದೆ.

ಕೇಂದ್ರ ಸಚಿವ ಕಿಶನ್ ರೆಡ್ಡಿ ಸಂತಾಪ
ಇನ್ನು ವಿಶಾಖಪಟ್ಟಣಂ ವಿಷಾನಿಲ ಸೋರಿಕೆ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಕೇಂದ್ರ ಸಚಿವ ಕಿಶನ್ ರೆಡ್ಡಿ ಸಂತಾಪ ಸೂಚಿಸಿದ್ದು, ದುರಂತದ ಕುರಿತು ತನಿಖೆಗೆ ಆದೇಶಿಸಲಾಗಿದೆ. ಈ ಕುರಿತಂತೆ ನಾನು ಆಂಧ್ರ ಪ್ರದೇಶ ಮುಖ್ಯ ಕಾರ್ಯದರ್ಶಿಗಳು ಮತ್ತು ಆಂಧ್ರ ಪ್ರದೇಶ  ಪೊಲೀಸ್ ಡಿಜಿಪಿ ಅವರೊಂದಿಗೆ ಮಾತನಾಡಿದ್ದೇನೆ. ಪರಿಸ್ಥಿತಿ ನಿಯಂತ್ರಿಸಲು ಬೇಕಾದ ಎಲ್ಲ ನೆರವು ಕೇಂದ್ರ ಸರ್ಕಾರದಿಂದ ದೊರೆಯಲಿದೆ ಎಂದು ಹೇಳಿದ್ದೇನೆ ಎಂದು ಹೇಳಿದ್ದಾರೆ.

ಅಂತೆಯೇ ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಿಜಕ್ಕೂ ಈ ದುರಂತ ದುರದೃಷ್ಟಕರವಾದದ್ದು ಎಂದು ಹೇಳಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT