ಕೊವಿಡ್-19: ಮಹಾರಾಷ್ಟ್ರದಲ್ಲಿ 1089 ಹೊಸ ಪ್ರಕರಣ, ಸೋಂಕಿತರ ಸಂಖ್ಯೆ 19,063ಕ್ಕೆ ಏರಿಕೆ
ಮಹಾರಾಷ್ಟ್ರ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ರಾಜ್ಯದಲ್ಲಿ ಶುಕ್ರವಾರ ಒಂದೇ ದಿನ 1089 ಹೊಸ ಕೊವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 19,063ಕ್ಕೆ ಏರಿಕೆಯಾಗಿದೆ.
ಮುಂಬೈ: ಮಹಾರಾಷ್ಟ್ರ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ರಾಜ್ಯದಲ್ಲಿ ಶುಕ್ರವಾರ ಒಂದೇ ದಿನ 1089 ಹೊಸ ಕೊವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 19,063ಕ್ಕೆ ಏರಿಕೆಯಾಗಿದೆ.
ಇಂದು ವಾಣಿಜ್ಯ ನಗರಿ ಮುಂಬೈನಲ್ಲಿಯೇ 748 ಹೊಸ ಪ್ರಕರಣಗಳು ವರದಿಯಾಗಿದ್ದು, ಮಹಾ ರಾಜಧಾನಿಯ ಸೋಂಕಿತರ ಸಂಖ್ಯೆ 11,967ಕ್ಕೆ ಏರಿಕೆಯಾಗಿದೆ.
ನಗರದಲ್ಲಿ ಮಹಾಮಾರಿಗೆ ಮತ್ತೆ 25 ಮಂದಿ ಬಲಿಯಾಗಿದ್ದು, ಮುಂಬೈನಲ್ಲಿ ಸಾವಿನ ಸಂಖ್ಯೆ 462ಕ್ಕೆ ಏರಿಕೆಯಾಗಿದೆ ಎಂದು ಬೃಹನ್ ಮುಂಬೈ ಮಹಾನಗರ ಪಾಲಿಕೆ ತಿಳಿಸಿದೆ.
ರಾಜ್ಯಾದ್ಯಂತ ಒಟ್ಟು 35 ಕೊರೋನಾ ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 731ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.